ನೆಹರು ಮೆಮೋರಿಯಲ್ ಕಾಲೇಜು ಸುಳ್ಯದಲ್ಲಿ ಒಂದು ವಾರದ ಉದ್ಯೋಗ ಕೌಶಲ್ಯ ತರಬೇತಿ ಸಂಪನ್ನ – ಕಹಳೆ ನ್ಯೂಸ್
ಸುಳ್ಯ : ನೆಹರು ಮೆಮೋರಿಯಲ್ ಕಾಲೇಜು ಸುಳ್ಯದಲ್ಲಿ ವಿದ್ಯಾರ್ಥಿನಿಯರಿಗಾಗಿ ಮಹೀಂದ್ರಾ & ಮಹೀಂದ್ರಾ ಸಂಸ್ಥೆಯ ಉಪಕ್ರಮವಾದ ನಾಂದಿ ಫೌಂಡೇಶನ್‌ನ ಮಹೀಂದ್ರಾ ಪ್ರೈಡ್ ಕ್ಲಾಸ್‌ರೂಮ್ (MPC) ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಒಂದು ವಾರದ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಸಂಪನ್ನಗೊಂಡಿತು. ಆಗಸ್ಟ್ 31 ರಿಂದ ಸೆಪ್ಟೆಂಬರ್ 5 ರವರೆಗೆ ಎರಡು ಬ್ಯಾಚ್‌ಗಳಲ್ಲಿ ನಡೆದ ಈ ತರಬೇತಿಯ ಪ್ರಯೋಜನವನ್ನು ಬಿಸಿಎ, ಬಿಎಸ್ಸಿ, ಬಿಕಾಂ, ಬಿಬಿಎ ಮತ್ತು ಬಿಎ ವಿಭಾಗಗಳ 95 ವಿದ್ಯಾರ್ಥಿನಿಯರು...







