Saturday, April 25, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ -ಕಹಳೆ ನ್ಯೂಸ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಸಂಭವಿಸಿರುವ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ತನಿಖೆಯನ್ನು ತೀವ್ರಗೊಳಿಸಿದೆ. ಈ ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ವ್ಯಕ್ತಿಯೊಬ್ಬನ ಭಾವಚಿತ್ರವನ್ನು ಬಿಡುಗಡೆ ಮಾಡಲಾಗಿದ್ದು, ಶಂಕಿತನ ಪತ್ತೆಗಾಗಿ ಸಾರ್ವಜನಿಕರ ಸಹಕಾರವನ್ನು ಕೋರಲಾಗಿದೆ. ಪೊಲೀಸರು ಬಿಡುಗಡೆ ಮಾಡಿರುವ ಭಾವಚಿತ್ರದಲ್ಲಿರುವ ವ್ಯಕ್ತಿಯು ಜಿಲ್ಲಾ ವ್ಯಾಪ್ತಿಯಲ್ಲಿ ನಡೆದಿರುವ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿರುವ ಸಾಧ್ಯತೆಗಳಿವೆ ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸದ್ರಿ...
ಬೆಂಗಳೂರುರಾಜ್ಯಸುದ್ದಿ

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ -ಕಹಳೆ ನ್ಯೂಸ್

ಬೆಂಗಳೂರು: ಒಂದುಕಡೆ ರಾಜ್ಯದಲ್ಲಿ ಗ್ಯಾಸ್ ಸಿಗುತ್ತಿಲ್ಲ ಅಂತ ಆಟೋ ಚಾಲಕರು ಗೋಳಾಡುತ್ತಿದ್ದಾರೆ. ಗ್ಯಾಸ್‌ಗಾಗಿ ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದಾರೆ. ಮತ್ತೊಂದು ಕಡೆ ನಮ್ಮ ಜನಪ್ರತಿನಿಧಿಗಳ ಮೋಜು-ಮಸ್ತಿಗೆ ಮಾತ್ರ ಬರ ಇಲ್ಲ. ಐಪಿಎಲ್ ಟಿಕೆಟ್ (IPL Ticket) ಪಡೆಯೋಕೆ ತಮ್ಮ ಪಿಎಗಳನ್ನೇ ಕ್ಯೂ ನಿಲ್ಲಿಸಿದ್ದಾರೆ ಶಾಸಕರು. ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ಕೊಡುವ ಮಾತುಕತೆ ಸರ್ಕಾರ- ಕೆಎಸ್‌ಸಿಎ (KSCA) ಮಧ್ಯೆ ಆಗಿದೆ. ನಾಳೆ ಬೆಂಗಳೂರು ಮತ್ತು ಚೆನೈ (RCB...
ಸುದ್ದಿ

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು -ಕಹಳೆ ನ್ಯೂಸ್

ಸೂಪರ್ ಸಂಡೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಆರ್‌ಸಿಬಿ ವರ್ಸಸ್ ಸಿಎಸ್‌ಕೆ (RCB vs CSK) ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಶನಿವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 19ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲೇ ಭರ್ಜರಿ ಶುಭಾರಂಭ ಪಡೆದ ಆರ್‌ಸಿಬಿ...
ಜಿಲ್ಲೆಸುದ್ದಿಹುಬ್ಬಳ್ಳಿ

ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್‌ಗೆ ಸಂಕಷ್ಟ : ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ ಸಂತ್ರಸ್ತೆ -ಕಹಳೆ ನ್ಯೂಸ್

ಹುಬ್ಬಳ್ಳಿ: ಲವ್ ಜಿಹಾದ್  ಕೇಸಲ್ಲಿ ಜಿಮ್ ಟ್ರೈನರ್‌ಗೆ  ಮತ್ತೊಂದು ಸಂಕಷ್ಟ ಎದುರಾಗಿದೆ. ಸಮೀರ್ ವಿರುದ್ಧ ಸಂತ್ರಸ್ತೆ ಇದೀಗ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ಸಂತ್ರಸ್ತ ಯುವತಿ ಶುಕ್ರವಾರ (ಏ.3) ರಾತ್ರಿ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಸಮೀರ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ನಾನು ಜಿಮ್‌ಗೆ ಹೋಗುವಾಗ ಸಮೀರ್ ಪರಿಚಯವಾಗಿದ್ದ. 2025ರ ಆ.16ರಂದು ನನ್ನನ್ನು ಮನೆಗೆ ಕರೆಸಿಕೊಂಡಿದ್ದ. ಆ ವೇಳೆ ಜ್ಯೂಸ್‌ನಲ್ಲಿ ಮತ್ತು ಬರೋ ಪದಾರ್ಥ ಹಾಕಿ ನನಗೆ ಕುಡಿಸಿದ್ದ....
ಬೆಂಗಳೂರುರಾಜ್ಯಸುದ್ದಿ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಅಮಿತ್ ಶಾ ಸಹ ಭಾಗಿ, ಹಿಂದೂ ಧರ್ಮ ಆಚಾರ್ಯ ಮಹಾಸಭಾ ಆಯೋಜನೆ -ಕಹಳೆ ನ್ಯೂಸ್

ಬೆಂಗಳೂರು : ನಗರದ ಅರಿಶಿಣಕುಂಟೆಯ ನಗರೂರಿನ ಬಿಜಿಎಸ್‌ ಎಂಸಿಎಚ್‌ ಆಸ್ಪತ್ರೆ ಹಾಗೂ ಪಿಯು ಕಾಲೇಜು ಸಭಾಂಗಣದಲ್ಲಿ ಏ.4ರ ಶನಿವಾರ ನಡೆಯುವ ಸಭೆಯಲ್ಲಿ ದೇಶದ 100ಕ್ಕೂ ಹೆಚ್ಚು ಸ್ವಾಮೀಜಿಗಳು ಹಾಗೂ ಧಾರ್ಮಿಕ ಕೇಂದ್ರಗಳ ಪ್ರಮುಖರ ಜತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಭೆ ನಡೆಸಲಿದ್ದಾರೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಸಹ ಭಾಗವಹಿಸಲಿದ್ದಾರೆ. ಹಿಂದೂ ಧರ್ಮ ಆಚಾರ್ಯ ಮಹಾಸಭಾದಿಂದ 2 ದಿನ ಸಭೆ ಆಯೋಜಿಸಿದ್ದು ಏ.3ರ ಶುಕ್ರವಾರವೇ ಗುಜರಾತ್‌, ಉತ್ತರಪ್ರದೇಶ...
ಬೆಂಗಳೂರುರಾಜ್ಯಸುದ್ದಿ

ತೃತೀಯ ಭಾಷಾ ವಿವಾದಕ್ಕೆ ಈಗ ರಾಜ್ಯಪಾಲರ ಪ್ರವೇಶ -ಕಹಳೆ ನ್ಯೂಸ್

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಮರು ಪರಿಶೀಲಿಸುವಂತೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದು ಹಿಂದಿ ವಿವಾದಕ್ಕೆ ಈಗ ಮತ್ತೊಂದು ತಿರುವು ಲಭ್ಯವಾಗಿದೆ. ಈ ಸಂಬಂಧ ಲೋಕ ಭವನದಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಲಾಗಿದ್ದು ಈ ನಿರ್ಧಾರವನ್ನು ಸಮಗ್ರವಾಗಿ ಪರಿಶೀಲಿಸಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಉಪಚುನಾವಣೆ ಗೆಲುವಿಗೆ ಬಿ.ವೈ.ವಿಜಯೇಂದ್ರ ಸರ್ವ ಪ್ರಯತ್ನ – ಕಹಳೆ ನ್ಯೂಸ್

ಬೆಂಗಳೂರು : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ನಿರ್ಣಾಯಕ ಹಾಗೂ ಮಹತ್ವದ್ದಾಗಿ ಪರಿಣಮಿಸಿದ್ದು ಉಪಚುನಾವಣೆ ಗೆಲುವಿಗೆ ಸರ್ವ ಪ್ರಯತ್ನಗಳನ್ನೂ ಪ್ರಾರಂಭಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಜಯೇಂದ್ರ ಉಸ್ತುವಾರಿಯಲ್ಲಿ ನಡೆದ ಕೆ.ಆರ್‌.ಪೇಟೆ ಹಾಗೂ ಶಿರಾ ಉಪಚುನಾವಣೆಯ ಗೆಲುವಿನ ಕ್ರೆಡಿಟ್‌ ಅವರಿಗೆ ಸಂದಿತ್ತು. ಆದರೆ, ರಾಜ್ಯಾಧ್ಯಕ್ಷರಾದ ನಂತರ ಎದುರಾದ ಚುನಾವಣೆಗಳಲ್ಲಿ ವಿಜಯೇಂದ್ರ ಕಾರ್ಯತಂತ್ರ ಅಷ್ಟೊಂದು ಯಶಸ್ಸು ಕಂಡಿರಲಿಲ್ಲ. ಹೀಗಾಗಿ ಈ ಬಾರಿ ಹಿನ್ನಡೆ...
ಸುದ್ದಿ

ರಾಜ್ಯ ಸರಕಾರದ ಅಭಿವೃದ್ಧಿ ಮಲತಾಯಿ ಧೋರಣೆ ಖಂಡಿಸಿ ಎಲ್ಲ ಗ್ರಾಮ ಪಂಚಾಯತಿ ಎದುರು ಬಿಜೆಪಿ ಪ್ರತಿಭಟನೆ : ಅಭಿವೃದ್ಧಿ ಶೂನ್ಯ ರಾಜ್ಯ ಸರಕಾರ: ಶಾಸಕ ಗುರುರಾಜ್‌ ಗಂಟಿಹೊಳೆ ವಾಗ್ದಾಳಿ-ಕಹಳೆ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳ ನಿರ್ಲಕ್ಷ್ಯ ಹಾಗೂ ರಾಜ್ಯ ಸರ್ಕಾರದ ಮಲತಾಯಿ ಧೋರಣೆ ವಿರೋಧಿಸಿ ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಶಾಸಕರಾದ ಗುರುರಾಜ್‌ ಶೆಟ್ಟಿ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯತ್ ಕಚೇರಿಗಳ ಎದುರುಗಡೆ ಗುರುವಾರ ಪ್ರತಿಭಟನೆ ನಡೆಸಿ, ಪಿಡಿಒ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಹಾಗೂ ಮಂಡಲ...
1 18 19 20 21 22 3,335
Page 20 of 3335