Sunday, June 14, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿ

ಇಂದು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಅನೇಕ ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು (Rain), 17 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 24ರಂದು ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿಗೆ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಚೊಚ್ಚಲ ಭೇಟಿ :ಇಂದು ನಾಯಕರೊಂದಿಗೆ ಸಭೆ -ಕಹಳೆ ನ್ಯೂಸ್

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಜಯಭೇರಿ ಬಾರಿಸಿದ ಬೆನ್ನಲ್ಲೇ, ಭಾರತೀಯ ಜನತಾ ಪಕ್ಷದ ಹೈಕಮಾಂಡ್ ಈಗ ದಕ್ಷಿಣ ಭಾರತದ ಹೆಬ್ಬಾಗಿಲಾದ ಕರ್ನಾಟಕದತ್ತ ತನ್ನ ಸಂಪೂರ್ಣ ಚಿತ್ತ ನೆಟ್ಟಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಈಗಿನಿಂದಲೇ ಸನ್ನದ್ಧಗೊಳಿಸಲು ಖುದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಶನಿವಾರ ತಡರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಚೊಚ್ಚಲ ಭೇಟಿ ನೀಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಿತಿನ್ ನಬಿನ್ ಅವರನ್ನು ರಾಜ್ಯ...
ದೆಹಲಿಸುದ್ದಿ

ಬಿಸಿಲ ನಡುವೆ ದೆಹಲಿಯಲ್ಲಿ ತಂಪೆರೆದ ಮಳೆರಾಯ : ಇತ್ತ ತಾಪಮಾನ ಹೆಚ್ಚಳದಿಂದ ಆಂಧ್ರ, ಯುಪಿಯಲ್ಲಿ ರೆಡ್ ಅಲರ್ಟ್-ಕಹಳೆ ನ್ಯೂಸ್

ನವದೆಹಲಿ: ಬಿಸಿಲ ಬೇಗೆಯಿಂದ ಬೇಸತ್ತಿದ್ದ ದೆಹಲಿ ಜನರಿಗೆ ಮಳೆರಾಯ ತಂಪೆದರೆ, ಇತ್ತ ಆಂಧ್ರಪ್ರದೇಶ  ಹಾಗೂ ಉತ್ತರ ಪ್ರದೇಶದಲ್ಲಿ  ತಾಪಮಾನ ಹೆಚ್ಚಳದಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇಂದು (ಮೇ 23) ಮುಂಜಾನೆ ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ದಿಢೀರ್ ಮಳೆಯಾಗಿ, ತಂಪು ವಾತಾವರಣ ಸೃಷ್ಟಿಯಾಗಿದೆ. ಆದರೆ ಇದರ ನಡುವೆಯೂ ಹವಾಮಾನ ಇಲಾಖೆ ನಗರದಲ್ಲಿ ಮೇ 28ರವರೆಗೆ ಹೀಟ್‌ವೇವ್ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದೆ. ಈಗಾಗಲೇ ಉತ್ತರ ಪ್ರದೇಶದ ಕೆಲವು...
ರಾಜ್ಯಸುದ್ದಿ

ಕೊಯಮತ್ತೂರಲ್ಲಿ 10 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಕೊಲೆ :ಸಿಎಂ ವಿಜಯ್ ಸರ್ಕಾರದ ವಿರುದ್ಧ ಡಿಎಂಕೆ ಕಿಡಿ – ಕಹಳೆ ನ್ಯೂಸ್

ಚೆನ್ನೈ: ಕೊಯಮತ್ತೂರಿನ  ಸುಲೂರು ಪ್ರದೇಶದ ಕಣ್ಣಂಪಾಳಯಂ ಸರೋವರದ ಬಳಿ ಗಾಯಗಳಿಂದ ಕುಡಿರುವ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಕಿಡ್ನ್ಯಾಪ್ ಮತ್ತು ಕೊಲೆ ವಿಚಾರವಾಗಿ ಸಿಎಂ ವಿಜಯ್ ಸರ್ಕಾರದ ವಿರುದ್ಧ ಡಿಎಂಕೆ ಹರಿಹಾಯ್ದಿದೆ. ಕಾರ್ತಿಕ್ ಮತ್ತು ಮೋಹನ್ ರಾಜ್ ಬಂಧಿತ ಆರೋಪಿಗಳು. ಬಾಲಕಿ ಸುಲೂರು ಪ್ರದೇಶದ ತನ್ನ ಮನೆಯ ಹತ್ತಿರ ದಿನಸಿ ಖರೀದಿಸಲು ಅಂಗಡಿಗೆ ಹೋಗಿದ್ದಳು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ-ಕಹಳೆ ನ್ಯೂಸ್

ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ:457, 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ ಅಕ್ರ ಎಂಬಾತನನ್ನು ದಿನಾಂಕ:22-05-2026 ರಂದು, ಉಪ್ಪಿನಂಗಡಿ ಪೊಲೀಸ್ ಠಾಣಾ ತನಿಖೆ-2 ಪಿಎಸೈ ರವರಾದ ಕೌಶೀಕ್ ಬಿಸಿ, ಸಿಬ್ಬಂಧಿಯವರಾದ ಹೆಚ್ ಸಿ-826 ಶಿವರಾಮ್ ರೈ, ಪಿಸಿ-2277 ಮಹದೇವ ರವರು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಿ ಪತ್ತೆ ಮಾಡಿ ಮಾನ್ಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋಮಾಂಸಗಳ ಅಕ್ರಮ ಸಾಗಾಣಿಕೆ ಮತ್ತು ಗೋಮಾಂಸ ಹತ್ಯೆ ತಡೆಗಟ್ಟುವ ಕುರಿತು ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ವತಿಯಿಂದ ಪುತ್ತೂರು ಗ್ರಾಮಾಂತರ ಪೋಲಿಸ್ ಠಾಣೆಗೆ ಮನವಿ-ಕಹಳೆ ನ್ಯೂಸ್

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನುಬಾಹಿರವಾಗಿ ಗೋಮಾಂಸದ ಸಾಗಾಣಿಕೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಬಲಿ ಬಲಿ(ಕುರ್ಬಾನಿ) ನಡೆಯುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಲು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಜಾನುವಾರು ಸಾಗಾಟ ನಿಯಮಾವಳಿ 2021 ಅನ್ವಯ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಗ್ರಾಮಾಂತರ ವತಿಯಿಂದ ವತಿಯಿಂದ ಇಂದು ಪುತ್ತೂರು ಗ್ರಾಮಾಂತರ ಪೋಲಿಸ್ ಠಾಣೆಗೆ ಮನವಿ...
ಉಡುಪಿಜಿಲ್ಲೆಸುದ್ದಿ

ಉಡುಪಿ : ಚಿರತೆ ಕೊಂದ ಆರೋಪಿಗಳು ಅರೆಸ್ಟ್ – ಕಹಳೆ ನ್ಯೂಸ್

ಉಡುಪಿ: ಕುಂದಾಪುರ (Kundapura) ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಯಡಮೊಗೆ ಗ್ರಾಮದ ಸಾಲಿಮಕ್ಕಿಯ ಮಂಜುನಾಥ ಶೆಟ್ಟಿ, ಕಾವ್ರಾಡಿ ಗ್ರಾಮದ ಕಂಡೂರಿನ ನದೀಮ್ ಕರಾಣಿ, ಯಡಮೊಗೆ ಗ್ರಾಮದ ಹನೆಬಚ್ಚಲು ನಿವಾಸಿಗಳಾದ ನಾಗರಾಜ ಭೋವಿ ಹಾಗೂ ವೆಂಕಟರಮಣ ಭೋವಿ ಬಂಧಿತ ಆರೋಪಿಗಳು. ಬಂಧಿತರಿಂದ ಚಿರತೆಯ 4 ಕಾಲಿನ ಉಗುರು ಹಾಗೂ ಮೂಳೆಯ ಬಿಡಿ ಭಾಗಗಳು, ಬಂದೂಕು,...
ಸುದ್ದಿ

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ; 82 ಜನ ಸಾವು -ಕಹಳೆ ನ್ಯೂಸ್

ಬೀಜಿಂಗ್: ಉತ್ತರ ಚೀನಾದ  ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಸಂಭವಿಸಿದ ಅತಿದೊಡ್ಡ ಕೈಗಾರಿಕಾ ವಿಪತ್ತಾಗಿದೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ 7:29 ಕ್ಕೆ ಸ್ಫೋಟ ಸಂಭವಿಸಿದೆ. ಆ ಸಮಯದಲ್ಲಿ ಒಟ್ಟು 247 ಕಾರ್ಮಿಕರು ನೆಲದಡಿಯಿದ್ದರು. ಅವರಲ್ಲಿ ಹೆಚ್ಚಿನವರನ್ನು ಶನಿವಾರ ಬೆಳಗ್ಗೆ ಮೇಲ್ಮೈಗೆ ತರಲಾಗಿದೆ. ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ನಾಪತ್ತೆಯಾದ ಒಂಬತ್ತು ಜನರಿಗಾಗಿ ರಕ್ಷಣಾ...
1 26 27 28 29 30 3,392
Page 28 of 3392