Friday, March 6, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿ

ದುಬೈನಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರು ಬೆಂಗಳೂರಿಗೆ ವಾಪಸ್‌ : ಶಾಸಕ ನಾಗೆಂದ್ರರಿಂದ ವಿಮಾನದ ವ್ಯವಸ್ಥೆ – ಕಹಳೆ ನ್ಯೂಸ್

ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದ ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ಬಂದಿಳಿದಿದ್ದಾರೆ. ಬಳ್ಳಾರಿಯ 35 ಮಂದಿ ಹಾಗೂ ಚಿತ್ರದುರ್ಗ 15 ಮಂದಿ ಸೇರಿ 246 ಕನ್ನಡಿಗರು ಮಾ.4 ರಂದು ಶಾರ್ಜಾ ದಿಂದ ಕೊಚ್ಚಿನ್‍ಗೆ ಬಂದಿಳಿದಿದ್ದರು. 50 ಮಂದಿಗೆ ಅಲ್ಲಿಂದ ಬೆಂಗಳೂರಿಗೆ ಶಾಸಕ ಬಿ ನಾಗೇಂದ್ರ ಅವರು ವಿಮಾನದ ವ್ಯವಸ್ಥೆ ಮಾಡಿದ್ದರು. ಇಂದು ಬೆಳಗ್ಗೆ (ಮಾ.5) ಅವರೆಲ್ಲ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಇದನ್ನೂ ಓದಿ: ದುಬೈನಿಂದ...
ದೆಹಲಿರಾಜ್ಯಸುದ್ದಿ

ಯುದ್ಧದ ಎಫೆಕ್ಟ್‌ : ವಾಣಿಜ್ಯ LPG ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು -ಕಹಳೆ ನ್ಯೂಸ್

ನವದೆಹಲಿ/ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಅನಿಲ ಪೂರೈಕೆ ಮೇಲೂ ಪರಿಣಾಮ ಬೀರಿದೆ. ಹೀಗಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿಗಳನ್ನ ಸ್ಥಗಿತಗೊಳಿಸಿರುವುದಾಗಿ ಇಂಡೇನ್ ಆಯಿಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಿರ್ದೇಶನದ ಮೇರೆಗೆ 19 ಕೆಜಿ ಮತ್ತು 47 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಮೇಲಿನ ರಿಯಾಯಿತಿಗಳನ್ನ ರದ್ದುಗೊಳಿಸಿರುವುದಾಗಿ ಹೇಳಿದೆ. ಪ್ರಕಟಣೆಯಲ್ಲಿ ಏನಿದೆ? ಮಧ್ಯಪ್ರಾಚ್ಯದಲ್ಲಿನ ಭೌಗೋಳಿಕ ಮತ್ತು ರಾಜಕೀಯ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು 19 ಕೆಜಿ ಮತ್ತು 47.5 ಕೆಜಿ...
ಸುದ್ದಿ

ಕಡಿಮೆ ಬೆಲೆಗೆ ಚಿನ್ನದ ಆಸೆ ತೋರಿಸಿ ಉದ್ಯಮಿಯಿಂದ 20 ಲಕ್ಷ ದರೋಡೆ -ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ/ದೇವನಹಳ್ಳಿ: ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇನೆ ಅಂತ ಆಸೆ ತೋರಿಸಿ ಹೈದರಾಬಾದ್ ಮೂಲದ ಉದ್ಯಮಿಯನ್ನ ಕರೆಸಿಕೊಂಡ ಖತರ್ನಾಕ್ ಗ್ಯಾಂಗ್ ಆತನ ಬಳಿ 20 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವೆಂಕಟಗಿರಿ ಕೋಟೆ ಗ್ರಾಮದ ಬಳಿ ನಡೆದಿದೆ. ಹೈದರಾಬಾದ್ ಮೂಲದ ವಿಶ್ವಪ್ರಸಾದ್ ರೆಡ್ಡಿ, ಕುಮಾರ್ ಎಂಬಾತನೊಂದಿಗೆ ವ್ಯವಹಾರ ಮಾಡಿದ್ದರು. ಕುಮಾರ್ ತನ್ನ ಬಳಿ ನಾಲ್ಕು ಕೆಜಿ ಚಿನ್ನದ ನಾಣ್ಯಗಳಿದ್ದು, ಕೇವಲ 20 ಲಕ್ಷಕ್ಕೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನರಿಕೊಂಬು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಮಾರ್ಚ್ 4 ಬುಧವಾರ ಜರಗಿತು. ಬಂಟ್ವಾಳ ಸಮೂಹ ಸಂಪನ್ಮೂಲ ಕೇಂದ್ರದ ಐ ಆರ್‌ ಟಿ ಸುರೇಖಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವಿಜ್ಞಾನದ ಕುರಿತು ಆಸಕ್ತಿಯನ್ನು ಅಭಿವೃದ್ಧಿಪಡಿಸಲು, ಪ್ರಾಯೋಗಿಕತ್ಮಕ ಚಿಂತನೆಯನ್ನು ಬೆಳೆಸುವುದು, ಮೂಡನಂಬಿಕೆಗಳನ್ನು ಹೋಗಲಾಡಿಸಿ ವೈಜ್ಞಾನಿಕ ಚಿಂತನೆ ಮತ್ತು ಸಮಸ್ಯೆಗಳನ್ನು ಬಗೆಹರಿಸುವ ಸಾಮರ್ಥ್ಯವನ್ನು ಬೆಳೆಸುವ ಸಲುವಾಗಿ ವಿಜ್ಞಾನದ ದಿನಾಚರಣೆ...
ಸುದ್ದಿ

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ಡಿಕ್ಕಿ; ಇರಾನ್‌ ನೌಕೆ ಮುಳುಗಡೆ : 148 ಮಂದಿ ನಾಪತ್ತೆ – ಕಹಳೆ ನ್ಯೂಸ್

ಕೊಲಂಬೊ: ಶ್ರೀಲಂಕಾದ ಬಳಿ ಅಮೆರಿಕದ ಜಲಾಂತರ್ಗಾಮಿ ದಾಳಿಯಿಂದ ಇರಾನ್‌ನ ಯುದ್ಧನೌಕೆ ಐರಿಸ್‌ ದೇನಾ ಮುಳುಗಡೆಯಾಗಿದೆ. ನೌಕೆ ಮುಳುಗಿದ ಪರಿಣಾಮ ಕನಿಷ್ಠ 148 ನಾವಿಕರು ನಾಪತ್ತೆಯಾಗಿದ್ದಾರೆ. 78 ಮಂದಿ ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡ 32 ಸಿಬ್ಬಂದಿಯನ್ನು ಶ್ರೀಲಂಕಾದ ಅಧಿಕಾರಿಗಳು ರಕ್ಷಿಸಿದ್ದಾರೆ. ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ. ಕೊಲಂಬೊ: ಶ್ರೀಲಂಕಾದ ಬಳಿ ಅಮೆರಿಕದ ಜಲಾಂತರ್ಗಾಮಿ ದಾಳಿಯಿಂದ ಇರಾನ್‌ನ ಯುದ್ಧನೌಕೆ ಐರಿಸ್‌ ದೇನಾ ಮುಳುಗಡೆಯಾಗಿದೆ. ಭಾರತದ ವಿಶಾಖಪಟ್ಟಣದಲ್ಲಿ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಫ್ಲೀಟ್ ರಿವ್ಯೂ / ಮಿಲನ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಟಿಪ್ಪರ್ ಲಾರಿಯಲ್ಲಿ ಮಣ್ಣು ಸಾಗಾಟ – ಸಾರ್ವಜನಿಕರ ಆಕ್ರೋಶ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಬಿ.ಸಿ ರೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿ ಮೂಲಕ ಮಣ್ಣು ಸಾಗಿಸುತ್ತಿದ್ದ ಬಗ್ಗೆ ವರದಿಯಾಗಿದೆ. ಟಿಪ್ಪರ್ ಲಾರಿಯಲ್ಲಿ ಮಣ್ಣು ಸಾಗಿಸುವ ಸಂದರ್ಭ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಮಣ್ಣಿನ ಮೇಲೆ ಯಾವುದೇ ಟರ್ಪಲ್ ಹೊದಿಕೆ ಹಾಕಲಿಲ್ಲ.. ಟಿಪ್ಪರಿನ ಹಿಂಬದಿಯಿಂದ ಗಾಳಿಯ ಒತ್ತಡಕ್ಕೆ ಮಣ್ಣು ಮತ್ತು ಸಣ್ಣ ರೀತಿಯ ಮರಳು ಬೀಳುತ್ತಿದ್ದು ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಅಂತೆಯೇ ಟಿಪ್ಪರ್ ಚಾಲಕರು ಅತಿ...
ಜಿಲ್ಲೆಸುದ್ದಿಹಾಸನ

ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ ವಿದ್ಯಾರ್ಥಿಗಳ ಎದುರೇ ದುರ್ಮರಣ -ಕಹಳೆ ನ್ಯೂಸ್

ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಶಿಕ್ಷಕರನ್ನು ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ಅವರು ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ಕೊಠಡಿಯಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ವಿದ್ಯಾರ್ಥಿಗಳು ಹಾಗೂ ಸಹ...
ಸುದ್ದಿ

ಕತಾರ್‌ನಲ್ಲಿ 10 ಶಂಕಿತ ಐಆರ್‌ಜಿಸಿ ಗೂಢಚಾರರ ಬಂಧನ -ಕಹಳೆ ನ್ಯೂಸ್

ಕತಾರ್‌: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ (ಐಆರ್‌ಜಿಸಿ) ಗೂಢಚಾರರು ಎಂಬ ಶಂಕೆ ಮೇಲೆ 10 ಮಂದಿಯನ್ನು ಕತಾರ್‌ನಲ್ಲಿ ಬಂಧಿಸಲಾಗಿದೆ. ದೇಶದ ನಿರ್ಣಾಯಕ ಮತ್ತು ಮಿಲಿಟರಿ ಮೂಲಸೌಕರ್ಯದ ಬಗ್ಗೆ ಗುಪ್ತಚರ ಮಾಹಿತಿ ಸಂಗ್ರಹಿಸಲು ಏಳು ಶಂಕಿತರಿಗೆ ಬೇಹುಗಾರಿಕೆ ಕಾರ್ಯಾಚರಣೆಗಳನ್ನು ವಹಿಸಲಾಗಿತ್ತು. ಬೇಹುಗಾರಿಕೆ ಆರೋಪ ಹೊತ್ತಿರುವ ಇತರ ಮೂವರು ಡ್ರೋನ್‌ಗಳನ್ನು ನಿರ್ವಹಿಸುವಲ್ಲಿ ತರಬೇತಿ ಪಡೆದಿದ್ದರು ಎಂದು ವರದಿಯಾಗಿದೆ. ತನಿಖೆಯ ಸಮಯದಲ್ಲಿ ಶಂಕಿತರು ಇರಾನಿನ ರೆವಲ್ಯೂಷನರಿ ಗಾರ್ಡ್‌ನೊಂದಿಗೆ ಸಂಪರ್ಕದಲ್ಲಿರುವುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಬೇಹುಗಾರಿಕೆ ಮತ್ತು...
1 2 3 4 5 3,282
Page 3 of 3282