ಇಳಂತಿಲದಲ್ಲಿ ಹಿಂದೂ ಧರ್ಮಜಾಗೃತಿ ಸಭೆ ಸಂಪನ್ನ | ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಸಂಕಲ್ಪ – ಸುಬ್ರಹ್ಮಣ್ಯ ಕುಮಾರ್ ಅಗರ್ತ
ಇಳಂತಿಲ : ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮಸ್ತ ಹಿಂದೂ ಧರ್ಮಪ್ರೇಮಿಗಳ ವತಿಯಿಂದ ಹಿಂದೂ ಧರ್ಮಜಾಗೃತಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ಉದ್ಘಾಟನೆಯನ್ನು ಬೆಳ್ತಂಗಡಿಯ ಖ್ಯಾತ ನ್ಯಾಯವಾದಿಗಳಾದ ಶ್ರೀ ಸುಬ್ರಹ್ಮಣ್ಯ ಅಗರ್ತ ಮಾಡಿದರು. ಈ ವೇಳೆ ವ್ಯಾಸಪೀಠದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ಸಮನ್ವಯಕರಾದ ಶ್ರೀ ಗುರುಪ್ರಸಾದ ಗೌಡ, ಸನಾತನ ಸಂಸ್ಥೆಯ ಸೌ ಲಕ್ಷ್ಮೀ ಪೈ ಉಪಸ್ಥಿತರಿದ್ದರು. ವೇದಮೂರ್ತಿಗಳಾದ ಶ್ರೀ ಸುಬ್ರಹ್ಮಣ್ಯ ಪ್ರಸಾದ ಹಾಗೂ ಶ್ರೀ ಶ್ರೀರಾಮ ಇವರು...







