ಫೆ.14ರಂದು ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂಡಳಿ (ರಿ.) ಸಾಜ, ಬಲ್ನಾಡು ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಸಾಜ ಬಲ್ನಾಡು ಇದರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಕಹಳೆ ನ್ಯೂಸ್
ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂಡಳಿ (ರಿ.) ಸಾಜ, ಬಲ್ನಾಡು ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಸಾಜ ಬಲ್ನಾಡು ಇದರ ಆಶ್ರಯದಲ್ಲಿ ಫೆ.14ರಂದು 36ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದಲ್ಲಿ ನಡೆಯಲಿದೆ. ಸಂಜೆ 4ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭಗೊಳ್ಳಲಿದ್ದು, ಬಲ್ನಾಡಿನ ಅರ್ಚಕರಾದ ಬಿ. ಕುಮಾರ ಹೊಳ್ಳ ಅವರಿಂದ ಪೂಜೆ ಕಥಾ ಪ್ರವಚನ ನಡೆಯಲಿದೆ. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ...







