ಮೇ 28 ರಂದು ಅಮ್ಮ ಮಂಗಳೂರಿಗೆ ಆಗಮನ ; ಚಪ್ಪರ ಮುಹೂರ್ತ ನೆರವೇರಿಸಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್
ಮಂಗಳೂರು: ಮೇ.06: ಮಂಗಳೂರಿನ ಮಾತಾ ಅಮೃತಾನಂದಮಯಿ ಮಠಕ್ಕೆ ಮೇ 28 ರಂದು ಆಗಮಿಸುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಕಾರ್ಯಕ್ರಮ” ಬ್ರಹ್ಮಸ್ಥಾನಂ ಮಹೋತ್ಸವ ಮತ್ತು ಅಮೃತಸಂಗಮ 2026″ದ ಪ್ರಯುಕ್ತ ಚಪ್ಪರ ಮುಹೂರ್ತ ಜರುಗಿತು. ಸ್ವಾಮಿನಿ ಮಂಗಳಾಮೃತ ಪ್ರಾಣ ರವರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿಕಟಪೂರ್ವ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ವಿದ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡುತ್ತಾ ” ಮಾನವ ಮಹಾದೇವತ್ವಕ್ಕೆ ಏರುವ...







