Friday, June 19, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿ

ಅಂದು ಇಂದಿರಾಗಾಂಧಿ ಹೇಳಿದರೆ ‘ಶಿಸ್ತು’, ಇಂದು ಮೋದಿ ಹೇಳಿದರೆ ‘ತಪ್ಪು’ – ಕಾಂಗ್ರೆಸ್‌ ಟೀಕೆಗೆ ಅಶೋಕ್‌ ತಿರುಗೇಟು -ಕಹಳೆ ನ್ಯೂಸ್

ಬೆಂಗಳೂರು: ದೇಶದ ಹಿತದೃಷ್ಟಿಯಿಂದ ಚಿನ್ನ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಬಿಜೆಪಿ ನಾಯಕರು ಈಗ ತಿರುಗೇಟು ನೀಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನೆನಪಿನ ಶಕ್ತಿ ನಿಗೂಢವಾಗಿ ಕೆಲಸ ಮಾಡುತ್ತದೆ ಎಂದು ಟೀಕಿಸಿದ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಈ ಹಿಂದೆ ಕಾಂಗ್ರೆಸ್ ಸರ್ಕಾರಗಳೂ ಸಹ ಇದೇ ರೀತಿಯ ನಿಲುವು ತಳೆದಿದ್ದವು...
ರಾಜ್ಯಸುದ್ದಿ

ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ದುರ್ಮರಣ – ಕಹಳೆ ನ್ಯೂಸ್

ಆದಿಬಟ್ಲಾ ಬಳಿಯ ಹೊರ ವರ್ತುಲ ರಸ್ತೆಯಲ್ಲಿ (ORR) ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೆಲುಗು ನಟ ಸೇರಿದಂತೆ ಆಂಧ್ರಪ್ರದೇಶದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ತೆಲುಗು ನಟ ಕೆ.ಭರತ್ ಕಾಂತ್ (Bharat Kanth) ಮತ್ತು ಜಿ.ಸಾಯಿ ತ್ರಿಲೋಕ್ (31) ಎಂದು ಗುರುತಿಸಲಾಗಿದೆ. ಇಬ್ಬರೂ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯವರು. ಇವರಿಬ್ಬರೂ ಹೊರ ವರ್ತುಲ ರಸ್ತೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಚಾಲಕ ಭರತ್ ಕಾಂತ್ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ...
ಜಿಲ್ಲೆಸುದ್ದಿ

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಯುವತಿ ಆತ್ಮಹತ್ಯೆ -ಕಹಳೆ ನ್ಯೂಸ್

ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು  ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿ (Young Woman) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ವೇತಾ ಕೊಟೆನ್ನವರ್ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೃತ ಶ್ವೇತ ಹಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎನ್ನುವ ಯುವಕನನ್ನ ಪ್ರೀತಿಸುತ್ತಿದ್ದಳು. ಈ ವಿಷಯವನ್ನು ತನ್ನ ಕುಟುಂಬಸ್ಥರಿಗೆ...
ಜಿಲ್ಲೆರಾಜ್ಯಸುದ್ದಿ

ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ -ಕಹಳೆ ನ್ಯೂಸ್

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ. ಪರಿಹಾರ ಘೋಷಿಸಿದೆ. ಭಾನುವಾರ (ಮೇ 10) ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ವೇಳೆ ಚಿರತೆ ದಾಳಿ ನಡೆಸಿತ್ತು. ಈ ವೇಳೆ ಬಾಲಕ ಸಾವನ್ನಪ್ಪಿದ್ದ. ಸದ್ಯ ಅರಣ್ಯ ಇಲಾಖೆ ಬಾಲಕನ ಕುಟುಂಬಸ್ಥರಿಗೆ 20 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಈಗಾಗಲೇ 5 ಲಕ್ಷ ರೂ. ಚೆಕ್ ನೀಡಿದ್ದಾರೆ. ಇನ್ನುಳಿದ ಹಣವನ್ನು ಅಕೌಂಟ್ ಮಾಹಿತಿ ಪಡೆದು ಶೀಘ್ರದಲ್ಲೇ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕ್ಯಾಂಟೀನ್ ಹೆಸರಲ್ಲಿ ವೇಶ್ಯಾವಾಟಿಕೆ… ಪೊಲೀಸರ ದಾಳಿ, ಮೂವರ ಬಂಧನ -ಕಹಳೆ ನ್ಯೂಸ್

ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ 'ಪವನ್ ಕ್ಯಾಂಟೀನ್' ಮೇಲೆ ಬೆಳ್ತಂಗಡಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆಹಚ್ಚಿದ್ದಾರೆ. ದಾಳಿಯ ವೇಳೆ ಕ್ಯಾಂಟಿನ್ ಮಾಲೀಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾಂಟೀನ್ ಮಾಲಕ ಸುಂದರ್ ಶೆಟ್ಟಿ ಹಾಗೂ ಗಿರಾಕಿಗಳಾದ ಉಸ್ಮಾನ್, ಹೈದರ್ ಬಂಧಿತರು. ಪವನ್‌ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿರುವುದು...
ಜಿಲ್ಲೆಸುದ್ದಿಹಾಸನ

ಯುವತಿ ವಿಚಾರವಾಗಿ ಕಿರುಕುಳ ಆರೋಪ :  ಆಡಿಯೋ ರೆಕಾರ್ಡ್ ಮಾಡಿಟ್ಟು ಯುವಕ ಆತ್ಮಹತ್ಯೆ -ಕಹಳೆ ನ್ಯೂಸ್

ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಆಡಿಯೋ ರೆಕಾರ್ಡ್  ಮಾಡಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಬಳಿ ನಡೆದಿದೆ. ತಾಲೂಕಿನ ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ಯುವಕ. ಇದೇ ಗ್ರಾಮದ ಶಂಕರ, ದರ್ಶನ್, ಚೇತನ್, ದಿನೇಶ್ ಎಂಬವರು ಯುವತಿಯೊಬ್ಬಳ ವಿಚಾರದಲ್ಲಿ ನನಗೆ ಕಿರುಕುಳ ನೀಡಿದ್ದಾರೆ. ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಆಡಿಯೋ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪೋಷಕರು ಮಕ್ಕಳನ್ನು ಸುಸಂಸ್ಕೃತರನ್ನಾಗಿ ರೂಪಿಸಬೇಕು :ಡಾ. ಧನಂಜಯ ಕುಂಬ್ಳೆ -ಕಹಳೆ ನ್ಯೂಸ್

ಪುತ್ತೂರು :ಶ್ರೇಷ್ಠ ವಿಚಾರಗಳನ್ನು ಗಳಿಸಿಕೊಳ್ಳುವ ಕಾರ್ಯ ಉಪನಯನ ಸಂಸ್ಕಾರದ ನಂತರ ಆರಂಭವಾಗುತ್ತದೆ. ಪೋಷಕರು ಮಕ್ಕಳಿಗೆ ಒಳ್ಳೆಯ ಸಂಸ್ಕಾರಗಳನ್ನು ನೀಡಿ ಬದುಕಿನಲ್ಲಿ ಮುನ್ನಡೆಯಲು ಪ್ರೇರೇಪಿಸಬೇಕು.ನಮ್ಮ ಪಠ್ಯಕ್ರಮಗಳಲ್ಲಿ ವೇದಮಂತ್ರಗಳ ಹಾಗೂ ಭಾರತೀಯ ಸಂಸ್ಕೃತಿಯ ಬಗ್ಗೆ ಸೇರ್ಪಡೆಗೊಳಿಸುವುದು ಅತ್ಯಗತ್ಯ. ನಾವೆಲ್ಲರೂ ಸಂಘಟಿತರಾಗಿ ಒಳ್ಳೆಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಾ ನಮ್ಮ ಪ್ರದೇಶಗಳನ್ನು ಸುಸಂಸ್ಕೃತವಾಗಿ ರೂಪಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಹಾಗೂ ಕನ್ನಡ ವಿಭಾಗದ ಸಹಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಅವರು ನುಡಿದರು. ಇವರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಗೋವಿಗಾಗಿ ಮೇವು : ಪುತ್ತೂರು ಗೋಶಾಲೆಗೆ ವಿಹಿಂಪ-ಬಜರಂಗದಳದಿಂದ ಹಸಿರು ಮೇವು ವಿತರಣೆ -ಕಹಳೆ ನ್ಯೂಸ್

ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ಗೋವಿಗಾಗಿ ಮೇವು ಎಂಬ ಕಾರ್ಯಕ್ರಮದ ಮೂಲಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗೋಶಾಲೆಗೆ ಹಸಿರು ಮೇವನ್ನು ನೀಡಲಾಯಿತು. ತಿಂಗಳಾಡಿ ಮತ್ತು ಭಕ್ತಕೋಡಿ ಘಟಕದ ಕಾರ್ಯಕರ್ತರು ಮೇವು ಸಂಗ್ರಹ ಮಾಡಿದರು. ವೈಷ್ಣವ್ ನೆಲಪ್ಪಾಲು ಅವರು ಪಿಕಪ್ ಒದಗಿಸಿದರು ಹಾಗೂ ಪುತ್ತೂರಿನ ಮಾಸ್ಟರ್ಸ್ ಸಂಸ್ಥೆಯ ಸವನೂರಿನಲ್ಲಿರುವ ಫಾರ್ಮ್ ಹೌಸ್ ತೋಟದಿಂದ ಮೇವು ಸಂಗ್ರಹಿಸಲು ಅನುವು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ...
1 49 50 51 52 53 3,398
Page 51 of 3398