ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ತೆರಳಿದ್ದ ಬೆಂಗಳೂರಿನ ಮಹಿಳೆ ಸಾವು -ಕಹಳೆ ನ್ಯೂಸ್
ಕಾರವಾರ: ಗೋಕರ್ಣ ಪ್ಯಾರಡೈಸ್ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್‌ಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರು ನಿವಾಸಿ ನಾಗರತಿನಮ್ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಕುಟುಂಬದ ಜೊತೆ ಆಗಮಿಸಿದ್ದ ಮಹಿಳೆ, ಬೋಟಿಂಗ್‌ಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ತಕ್ಷಣ 108 ಆಂಬುಲೆನ್ಸ್‌ಗೆ ಕರೆ ಮಾಡಿದರೂ ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪಿಸಲಾಗಿದೆ. ಬಳಿಕ ಕುಮಟಾದಿಂದ ಖಾಸಗಿ ಅಂಬುಲೆನ್ಸ್ ಕರೆಸಿ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಮಹಿಳೆ...







