ಭಾರತಕ್ಕೆ ಮತ್ತೆ ಬೆದರಿಕೆಯೊಡ್ಡಿದ ಅಮೆರಿಕ; ಈ ಕೆಲಸ ನಿಲ್ಲಿಸದಿದ್ದರೆ ಸುಂಕ ಏರಿಕೆ ಅನಿವಾರ್ಯ ಎಂದ ಟ್ರಂಪ್ – ಕಹಳೆ ನ್ಯೂಸ್
ವಾಷಿಂಗ್ಟನ್ : ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೋ ಅವರನ್ನು ಬಂಧಿಸಿದ ಬಳಿಕ ಜಾಗತಿಕ ಮಟ್ಟದಲ್ಲಿ ಕಠಿಣ ನಿಲುವು ತಾಳಿರುವ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಮತ್ತೆ ಭಾರತದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತ ರಷ್ಯಾದಿಂದ ಕಚ್ಚಾ ತೈಲ ಆಮದು ಮುಂದುವರಿಸಿದರೆ ಹೆಚ್ಚುವರಿ ದಂಡ ವಿಧಿಸಲಾಗುವುದು ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಒಳ್ಳೆಯ ವ್ಯಕ್ತಿ ಎಂದು ಹೇಳಿದ ಟ್ರಂಪ್, "ನಾನು ಸಂತೋಷವಾಗಿಲ್ಲ ಎಂಬುದು ಅವರಿಗೆ...







