ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು- ಕಹಳೆ ನ್ಯೂಸ್
ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಕೇರಳ ಮೂಲದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್(45), ಸಕೀರ್ (27) ಎಂದು ಗುರುತಿಸಲಾಗಿದೆ. ಕೇರಳ (Kerala) ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಬಸ್ ಡಿವೈಡರ್ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ...







