Thursday, June 18, 2026

ಸುದ್ದಿ

ಸುದ್ದಿ

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: ಗಾಯಾಳುಗಳಲ್ಲಿ ಓರ್ವ ವೃದ್ಧ ಸಾವು- ಕಹಳೆ ನ್ಯೂಸ್

ಮಂಗಳೂರು : ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಟಿಟಿ ವಾಹನ ಪಲ್ಟಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದವರಲ್ಲಿ ಓರ್ವ ವೃದ್ಧ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೇಖರಪ್ಪ (59) ಎಂದು ಗುರುತಿಸಲಾಗಿದೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೇಲನಹಳ್ಳಿ ಗ್ರಾಮದವರು ಸೇರಿದಂತೆ ಒಟ್ಟು 10 ಮಂದಿ, ಅವರಲ್ಲಿ ಮೂವರು ಮಕ್ಕಳು ಸೇರಿ, ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾರ್ಮಾಡಿ ಘಾಟ್‌ನ ಒಂಬತ್ತನೇ ತಿರುವಿನಲ್ಲಿ...
ಸುದ್ದಿ

ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು- ಕಹಳೆ ನ್ಯೂಸ್

ಮಂಗಳೂರು: ನವಮಂಗಳೂರು ಬಂದರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತ ಖಾರ್ಗೋ ಹಡಗು ಆಗಮಿಸಿದೆ. ಇರಾನ್ ಹಾಗೂ ಇಸ್ರೇಲ್ ಯುದ್ಧ ಶುರುವಾದ ಬಳಿಕ ರಾಜ್ಯಕ್ಕೆ ಆಗಮಿಸಿದ ಮೊದಲ ಹಡಗು ಇದಾಗಿದೆ. ಅಮೆರಿಕದ ಟೆಕ್ಸಾಸ್‍ನಿಂದ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತ ಪಿಕ್ಸಿಸ್ ಪಯನೀರ್ ಎಂಬ ಹಡಗು ಮಂಗಳೂರಿನ ನವಮಂಗಳೂರು ಬಂದರಿಗೆ ಆಗಮಿಸಿದೆ. ಏಜೀಸ್ ಕಂಪನಿಗೆ ಎಲ್‍ಪಿಜಿಯನ್ನು ಈ ಹಡಗು ತಂದಿದೆ. ಮಾ.14 ರಂದು ಅಮೇರಿಕದಿಂದ ಪಿಕ್ಸಿಸ್ ಪಯಿನೀರ್ ಕಾರ್ಗೋ ಹಡಗು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ -ಕಹಳೆ ನ್ಯೂಸ್

ಬೆಂಗಳೂರು: ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರ ಮಾದನಾಯಕನಹಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ. ನಿಶಿಕಾ (4) ಮೃತ ಬಾಲಕಿ. ಯುಗಾದಿ ಹಬ್ಬ ಮುಗಿಸಿ ತಾಯಿ-ಮಗಳು ದೇವರ ದರ್ಶನಕ್ಕೆಂದು ದೇವಸ್ಥಾನಕ್ಕೆ ತೆರಳುತ್ತಿದ್ದರು. ಎರಡನೇ ಮಗು ಕಂಕುಳಲ್ಲಿ ಹಾಗೂ ಮೊದಲ ಮಗುವಿನ ಕೈ ಹಿಡಿದು ತೆರಳುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಲಾರಿ ಏಕಾಏಕಿ ಮಗುವಿನ ಮೇಲೆ ಹರಿದಿದೆ. ಅಪಘಾತದ...
ಕೇರಳಜಿಲ್ಲೆಸುದ್ದಿ

ವೈದ್ಯೆಯನ್ನು 27 ಬಾರಿ ಇರಿದು ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ :ಕೊಲ್ಲಂ ಕೋರ್ಟ್ ಆದೇಶ -ಕಹಳೆ ನ್ಯೂಸ್

ತಿರುವನಂತಪುರಂ: ವೈದ್ಯೆಯನ್ನು 27 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ ಅಪರಾಧಿಗೆ ಕೊಲ್ಲಂ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್  ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣ ಸಂಬಂಧ ಇಂದು (ಮಾ.21)ವಿಚಾರಣೆ ನಡೆಸಿದ ಕೊಲ್ಲಂ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಅಪರಾಧಿ ಜಿ. ಸಂದೀಪ್‌ಗೆ 30 ವರ್ಷಗಳ ಜೈಲು ಶಿಕ್ಷೆ ನೀಡಿದೆ. ಈ ಅವಧಿ ಮುಗಿದ ಬಳಿಕ ಜೀವಾವಧಿ ಶಿಕ್ಷೆ ಆರಂಭವಾಗುತ್ತದೆ ಎಂದು ತಿಳಿಸಿದೆ. ವಿಶೇಷ...
ಬೆಂಗಳೂರುರಾಜ್ಯಸುದ್ದಿ

ಐಪಿಎಲ್ ಟಿಕೆಟ್ ಮಾರಾಟಕ್ಕೆ ಆರ್‌ಸಿಬಿ ಸಜ್ಜು :ಇನ್ನೆರೆಡು ದಿನದಲ್ಲಿ ಮಾರಾಟ ಪ್ರಕ್ರಿಯೆ ಶುರು -ಕಹಳೆ ನ್ಯೂಸ್

ಬೆಂಗಳೂರು: 2026ರ ಐಪಿಎಲ್ ಟೂರ್ನಿಗೆ (IPL 2026) ಕೌಂಟ್ ಡೌನ್ ಶುರುವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೊದಲ ಹಂತದ ಪಂದ್ಯಗಳ ಟಿಕೆಟ್ ಮಾರಾಟ ಸದ್ಯದಲ್ಲೇ ಅಧಿಕೃತವಾಗಿ ಆರಂಭವಾಗಲಿದೆ. ಈ ಬಾರಿ ಆರ್‌ಸಿಬಿ ತನ್ನ ತವರಿನ ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲು ಕರ್ನಾಟಕ ಸರ್ಕಾರದಿಂದ ಅನುಮತಿ ಪಡೆದಿದೆ. ಇದರಿಂದ ಹೋಂ ಗ್ರೌಂಡ್ ಮ್ಯಾಚ್ ವೀಕ್ಷಣೆಗೆ ಟಿಕೆಟ್  ಖರೀದಿಗೆ ಭಾರೀ ಡಿಮ್ಯಾಂಡ್ ಶುರುವಾಗಲಿದೆ. ಐಪಿಎಲ್ ಟೂರ್ನಿ ಹಿನ್ನೆಲೆ...
ಜಿಲ್ಲೆಸುದ್ದಿಹಾಸನ

ಜೂಜಾಡುವ ವೇಳೆ ಪೊಲೀಸರ ದಾಳಿ : ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು -ಕಹಳೆ ನ್ಯೂಸ್

ಹಾಸನ: ಜೂಜಾಡುವ ವೇಳೆ ಪೊಲೀಸರು ದಾಳಿ ನಡೆಸಿದ್ದು, ಪೊಲೀಸರಿಂದ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (34) ಮೃತಪಟ್ಟ ವ್ಯಕ್ತಿ. ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಪಕ್ಕದ ತಾವರೆಹಳ್ಳಿ ನಿರ್ಜನ ಪ್ರದೇಶದಲ್ಲಿ ಯುವಕರ ಗುಂಪು ಜೂಜಾಡುತ್ತಿದ್ದರು. ಜೂಜಾಟದ ವಿಷಯ ತಿಳಿದು ಜಾವಗಲ್ ಪೊಲೀಸರು ದಾಳಿ‌ ಮಾಡಿದ್ದಾರೆ. ಈ ವೇಳೆ ಸ್ಥಳದಿಂದ‌ ತಪ್ಪಿಸಿಕೊಳ್ಳಲು‌ ಜೂಜಾಡುತ್ತಿದ್ದ ಯುವಕರು ಓಡಿದ್ದಾರೆ. ಮೂರ್ಛೆ ರೋಗದಿಂದ...
ಸುದ್ದಿ

ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!! – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್‌ ಒಂದರ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯನ್ನು ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ, ನಾರಾಯಣ ಕುಲಾಲ್ ಅವರ ಪುತ್ರ ತಿಲಕರಾಜ್ (28) ಎಂದು ಗುರುತಿಸಲಾಗಿದೆ. ಇವರು ಮಾರ್ಚ್ 19ರಂದು ಅನಂತಾಡಿಯಲ್ಲಿ ಮನೆಯೊಂದರ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸಕ್ಕೆ ಬೇಕಾದ ಮೆಟೀರಿಯಲ್ ಹಾಕಿ ಬಂದಿದ್ದರು. ಮಾರ್ಚ್‌ 20ರ ಸಂಜೆಯಿಂದ ಮನೆಯವರ ಸಂಪರ್ಕಕ್ಕೆ...
ಸುದ್ದಿ

ಕುಶಾಲನಗರ : ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಒಂಟಿ ಸಲಗ- ಕಹಳೆ ನ್ಯೂಸ್

ಮಡಿಕೇರಿ: ಕುಶಾಲನಗರದ  ನೆಲ್ಲಿ ಹುದಿಕೇರಿ ಗ್ರಾಮದಲ್ಲಿ ಒಂಟಿ ಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿದೆ. ಬೆಟ್ಟದ ಕಾಡು ನಿವಾಸಿ ಹೆಚ್.ಟಿ. ಸುನಿಲ್ ಎಂಬವರಿಗೆ ಸೇರಿದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದೆ. ದಂತದಿಂದ ಗುದ್ದಿದ ಪರಿಣಾಮ ಆಟೋ ಜಖಂಗೊಂಡಿದೆ. ಗ್ರಾಮದ ಶ್ರೀ ಸತ್ಯನಾರಾಯಣ ದೇವಾಲಯದ ಸುತ್ತಮುತ್ತಲಿನಲ್ಲಿ ಹಾಗೂ ಎಂ.ಜಿ.ಕಾಲೋನಿ ಸುತ್ತಮುತ್ತ ಸಂಚರಿಸಿ ಕಾಫಿ ತೋಟದೊಳಗೂ ದಾಂಧಲೆ ನಡೆಸಿದೆ. ಸಲಗವನ್ನು ಕಂಡ ಗ್ರಾಮಸ್ಥರು ದಿಕ್ಕಪಾಲಾಗಿ...
1 94 95 96 97 98 3,396
Page 96 of 3396