ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿ, 4 ವರ್ಷ ಜೈಲುವಾಸದ ನಂತರ ಬಿಡುಗಡೆಯಾದ ವಿ.ಕೆ ಶಶಿಕಲಾ ತಮಿಳುನಾಡಿನತ್ತ ಪ್ರಯಾಣ-ಕಹಳೆ ನ್ಯೂಸ್
ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕಾಗಿ 4 ವರ್ಷಗಳಿಂದ ಜೈಲು ಶಿಕ್ಷೆಗೆ ಗುರಿಯಾಗಿದ್ದ ಎಐಎಡಿಎಂಕೆ ಪಕ್ಷದ ಉಚ್ಚಾಟಿತ ನಾಯಕಿ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತ ಆಪ್ತೆ ವಿ.ಕೆ. ಶಶಿಕಲಾ ಇಂದು ತಮಿಳುನಾಡಿಗೆ ತೆರಳುತ್ತಿದ್ದಾರೆ. ಈ ಕಾರಣದಿಂದಾಗಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ತಮಿಳುನಾಡು-ಕರ್ನಾಟಕ ಗಡಿಯಲ್ಲಿ ಸುಮಾರು 1,500 ಪೊಲೀಸರನ್ನು ನಿಯೋಜಿಸಲಾಗಿದೆ. ಜನವರಿ 27 ರಂದು ಜೈಲಿನಿಂದ ಬಿಡುಗಡೆಗೊಂಡಿದ್ದ ಶಶಿಕಲಾ ಅವರಿಗೆ ಕೊರೊನಾ ಸೋಂಕು ತಗುಲಿದ್ದರಿಂದಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅದರ ನಂತರ...







