ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2021-22 ನೇ ಸಾಲಿನ ಕೇಂದ್ರ ಬಜೆಟ್ನ ವಿವರ –ಕಹಳೆ ನ್ಯೂಸ್
ನವದೆಹಲಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22 ನೇ ಸಾಲಿನ ಕೇಂದ್ರ ಬಜೆಟ್ನ್ನು ಮಂಡಿಸಿದ್ದಾರೆ. ಅವರು ಸತತ ಮೂರನೇ ಬಾರಿಗೆ ಬಜೆಟ್ ಮಂಡಿಸಿದ್ದು, ಈ ಬಾರಿಯ ಕೇಂದ್ರ ಬಜೆಟ್ ಡಿಜಿಟಲ್ ಆಗಿದೆ. ಸಾಂಪ್ರದಾಯಿಕ ಬಹಿ ಖಾತಾ ಬದಲಿಗೆ ಈ ಬಾರಿ ಟ್ಯಾಬ್ ಮೂಲಕ ಬಜೆಟ್ ಮಂಡಿಸಲಾಗಿದ್ದು, ಕೊರೊನಾ ಕಾರಣದಿಂದಾಗಿ ಇದೇ ಮೊದಲ ಬಾರಿಗೆ ಬಜೆಟ್ ಅನ್ನು ಕಾಗದ ರಹಿತವಾಗಿ ಮಂಡನೆ ಮಾಡಲಾಗಿದೆ. ಬಜೆಟ್ ಪ್ರತಿಯು ಆನ್ಲೈನ್...







