ಹಬ್ಬದ ಹೊತ್ತಲ್ಲೇ ಮೋದಿ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ-ಕಹಳೆ ನ್ಯೂಸ್
ನವದೆಹಲಿ: ಕುಸಿದ ಆರ್ಥಿಕತೆ ಚೇತರಿಕೆಗೆ ಪ್ರಧಾನಿ ಮೋದಿ ಭರ್ಜರಿ ಪ್ಲಾನ್ ಮಾಡಿಕೊಂಡಿದ್ದು ಶೀಘ್ರವೇ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಮುಂದಿನ ವಾರ ದೀಪಾವಳಿ ಬೋನಸ್ ಕೈಸೇರಲಿದೆ. ಕೊರೋನಾ ಬಿಕ್ಕಟ್ಟಿನ ನಡುವೆಯೇ ಕೇಂದ್ರದಿಂದ ಬೋನಸ್ ಘೋಷಣೆ ಮಾಡಲಾಗಿದೆ. ಆರ್ಥಿಕ ಚೇತರಿಕೆ ಉದ್ದೇಶದಿಂದ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಲು ಮೋದಿ ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಪೂರ್ವಸಿದ್ಧತೆ ಕೈಗೊಂಡಿದ್ದು ದಸರಾ, ದೀಪಾವಳಿ...







