ರಾಜ್ಯ ಸರ್ಕಾರದಿಂದ ಅಕ್ರಮ `BPL’ ಕಾರ್ಡುದಾರರಿಗೆ ಬಿಗ್ ಶಾಕ್ – ಕಹಳೆ ನ್ಯೂಸ್
ಬೆಂಗಳೂರು : ಅಕ್ರಮ ಬಿಪಿಎಲ್ ಕಾರ್ಡುದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರ್ಯಾಕ್ಟರ್ ಸೇರಿದಂತೆ ಇತರೆ ವಾಹನಗಳನ್ನು ಹೊಂದಿರುವವರು ಪಡಿತರ ಚೀಟಿಗಳನ್ನು ಹಿಂದಿರುಗಿಸಿ ರದ್ದುಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸುವ ಅಭಿಯಾನ ಆರಂಭಿಸಬೇಕು. ಕೊರೊನಾ ಆರಂಭಕ್ಕೂ ಮೊದಲು 63 ಸಾವಿರ ಪಡಿತರ ಕಾರ್ಡುಗಳನ್ನು ರದ್ದುಪಡಿಸಲಾಗಿತ್ತು. ಇದೀಗ...







