ಧರ್ಮಸ್ಥಳ ಉಳಿಸಿ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ: ಕುತ್ಯಾರು ನವೀನ್ ಶೆಟ್ಟಿ -ಕಹಳೆ ನ್ಯೂಸ್
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಗುರಿ ಮಾಡಿರುವ ಹಿಂದೂ ವಿರೋಧಿಗಳ ಸಂಚನ್ನು ವಿಫಲಗೊಳಿಸಿ ಹಿಂದೂಗಳ ಶ್ರದ್ಧಾ ಕೇಂದ್ರಗಳ ಮೇಲಿನ ದಾಳಿಯನ್ನು ಖಂಡಿಸಿ ಜಿಲ್ಲಾಯಾದ್ಯಂತ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುವ 'ಧರ್ಮಸ್ಥಳ ಉಳಿಸಿ' ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ ನೀಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ತಿಳಿಸಿದರು. ಪಕ್ಷದ ಕಚೇರಿಯಲ್ಲಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಮಾಲೋಚನ ಸಭೆಯನ್ನು ಉದ್ದೇಶಿಸಿ ಮಾತನಾಡಿದ...







