ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿದೆ ಮಂಗನ ಕಾಯಿಲೆ : 7 ಜನರಲ್ಲಿ ಸೋಂಕು ದೃಢ-ಕಹಳೆ ನ್ಯೂಸ್
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ (ಕೆ ಎಫ್ ಡಿ) ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಸಿದೆ. ಚಿಕ್ಕಮಗಳೂರಿನಲ್ಲಿ 7 ಜನರು ಮಹಾಮಾರಿ ಮಂಗನ ಕಾಯಿಲೆಯಿಂದ ಬಳಲುತ್ತಿದ್ದಾರೆ. ಚಿಕ್ಕಮಗಳೂರಿನ ಖಂಡ್ಯಾ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಕೆ ಎಫ್ ಡಿ ಸೋಂಕು ಕಾಣಿಸಿಕೊಂಡಿತ್ತು. ಇದೀಗ 7 ಜನರಲ್ಲಿ ಸೋಂಕು ಪತ್ತೆಯಾಗಿದೆ. ಎನ್ ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲೇ ಮೂವರಲ್ಲಿ ಸೋಂಕು ಪತ್ತೆಯಾಗಿದೆ....







