ಬಿಜೆಪಿಯು ತಮಿಳುನಾಡಿನಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಸರಕಾರಿಕರಣವಾಗಿರುವ ದೇವಾಲಯಗಳನ್ನು ಮುಕ್ತಗೊಳಿಸಬೇಕು ! ಹಿಂದೂ ಜನಜಾಗೃತಿ ಸಮಿತಿ-ಕಹಳೆ ನ್ಯೂಸ್
ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ. ಸಿ.ಟಿ. ರವಿಯವರು ‘ತಮಿಳುನಾಡಿನಲ್ಲಿ ಬಿಜೆಪಿಯು ಅಧಿಕಾರಕ್ಕೆ ಬಂದರೆ ಎಲ್ಲಾ ದೇವಾಲಯಗಳನ್ನು ಭಕ್ತರಿಗೆ ಒಪ್ಪಿಸುವುದಾಗಿ ಆಶ್ವಾಸನೆಯನ್ನು ನೀಡಿದ್ದಾರೆ. ಅವರು ‘ದೇವಾಲಯಗಳನ್ನು ಮುಕ್ತಗೊಳಿಸಿ!’, ಅಭಿಯಾನವನ್ನು ಬೆಂಬಲಿಸಿ ಅದರ ಬಗ್ಗೆ ಅವರು ಟ್ವೀಟ್ ಸಹ ಮಾಡಿದ್ದಾರೆ. ಶಾಸಕ ಸಿ.ಟಿ. ರವಿ ಅವರ ಆಶ್ವಾಸನೆಯನ್ನು ಹಿಂದೂ ಜನಜಾಗೃತಿ ಸಮಿತಿಯು ಸ್ವಾಗತಿಸುತ್ತಿದೆ. ಇದಕ್ಕೂ ಮೊದಲು ಕರ್ನಾಟಕದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ...







