ಕೋಲಾರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಉಸಿರುಗಟ್ಟಿಸಿ ಕೊಂದ ದುಷ್ಕರ್ಮಿಗಳು-ಕಹಳೆ ನ್ಯೂಸ್
ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲಿನ ಹೊಸಪಾಳ್ಯದಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳನ್ನು ಕೊಲೆಗೈದಿರುವ ಘಟನೆ ನಡೆದಿದೆ. ಕೊಲೆಯಾದ ದುರ್ದೈವಿ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ 18 ವರ್ಷದ ವಿದ್ಯಾರ್ಥಿನಿ ಪ್ರಿಯಾಂಕ ಎಂಬಾಕೆ. ಶ್ರೀನಿವಾಸಪುರ ಮೂಲದ ಯುವತಿಯ ಕುಟುಂಬದವರು ಹೊಸಪಾಳ್ಯ ದಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ನಿನ್ನೆ ಮನೆಯಲ್ಲಿ ಯಾರೂ ಇರಲಿಲ್ಲ. ಯುವತಿ ಮನೆಯಲ್ಲಿ ಅಡ್ಡಾಡಿಕೊಂಡಿರುವುದನ್ನು ನೆರೆ ಹೊರೆಯವರು ನೋಡಿದ್ದಾರೆ. ಆದರೆ ಪಾಲಕರು ಮನೆಗೆ...







