Friday, April 24, 2026

archiveCorona

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಖಾಸಗಿ ಆಸ್ಪತ್ರೆಯ ಮೂವರು ವೈದ್ಯರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಮೂವರು ವೈದ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮೂವರೂ ವೈದ್ಯರು, ಪುತ್ತೂರಿನಲ್ಲಿ ಜನಪ್ರಿಯತೆಯನ್ನು ಹೊಂದಿದ್ದು, ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದವರಾಗಿದ್ದು, ಕೊರೊನಾ ಪಾಸಿಟಿವ್ ಹೊಂದಿದ್ದ ರೋಗಿಗಳ ಸಂಪರ್ಕದಿಂದ ಇವರಿಗೂ ಸೋಂಕು‌ ತಗುಲಿದೆ ಎಂದು ತಿಳಿದು ಬಂದಿದೆ. ಸದ್ಯ ಒಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತೊಬ್ಬರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರವಾಗಿ ಮೂವರು ಗುಣಮುಖರಾಗಲಿ ಎಂಬುದು ಪುತ್ತೂರಿನ ಜನತೆಯ ಹಾರೈಕೆ....