ಇಂದಿನಿಂದ ಹಾಸನಾಂಬೆ ಸಾರ್ವಜನಿಕ ದರ್ಶನ – ಕಹಳೆ ನ್ಯೂಸ್
ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಹಾಸನಾಂಬೆ ದೇವಿಯನ್ನು ಇಂದಿನಿಂದ ಸಾರ್ವಜನಿಕರು ಕಣ್ತುಂಬಿಕೊಳ್ಳಬಹುದಾಗಿದೆ. ಸಾರ್ವಜನಿಕ ದರ್ಶನ ಆರಂಭದ ಹಿನ್ನೆಲೆಯಲ್ಲಿ ತಡರಾತ್ರಿಯಿಂದಲೇ ದೇವಿಯ ದರ್ಶನ ಪಡೆಯಲು ಭಕ್ತರು ಸಾಲುಗಟ್ಟಿ ನಿಂತಿದ್ದರು. ಧಾರ್ಮಿಕ ವಿಧಿ ವಿಧಾನಗಳ ಅನ್ವಯ ಆಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12.30 ರ ಬಳಿಕ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಇಂದು ಭಕ್ತರ ದರ್ಶನಕ್ಕೆ ಸಿದ್ಧತೆ ನಡೆಸಲಾಗಿತ್ತು. ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಹಾಸನಾಂಬೆಯ ದರ್ಶನ ಆರಂಭವಾಗಿದ್ದು,...


