ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 2020-21ನೇ ಸಾಲಿನ ವಿದ್ಯಾರ್ಥಿಗಳಿಗೆ ದೀಪಪ್ರದಾನ ಕಾರ್ಯಕ್ರಮ- ಕಹಳೆ ನ್ಯೂಸ್
ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 2020-21ನೇ ಸಾಲಿನ ವಿದ್ಯಾರ್ಥಿಗಳಿಗೆ ದೀಪಪ್ರದಾನ ಕಾರ್ಯಕ್ರಮ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡುತ್ತಾ ಇಂದಿನ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯವನ್ನು ತಿಳಿಸುವ ಶಿಕ್ಷಣದ ಅಗತ್ಯವಿದ್ದು ಈ ನಿಟ್ಟಿನಲ್ಲಿ ಶ್ರೀರಾಮ ವಿದ್ಯಾಸಂಸ್ಥೆ ಕಾರ್ಯನಿರ್ವಹಿಸುತ್ತದೆ. ಇಲ್ಲಿ ಕೇವಲ ವಿಷಯಗಳ ಶಿಕ್ಷಣ ಮಾತ್ರವಲ್ಲದೆ ತಮ್ಮ ಜೀವನ ಹೇಗಿರಬೇಕು ಎನ್ನುವ ಬದುಕಿನ ಶಿಕ್ಷಣ ನೀಡುತ್ತಿದೆ. ಸಂಸ್ಕಾರ ಹಾಗೂ ಸಂಸ್ಕೃತಿಯನ್ನು...







