Wednesday, June 10, 2026

archivekahale news

ಸುದ್ದಿ

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಕಾರ್ಯಾರಂಭ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಪದಚ್ಯುತಿಗೊಳಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಾರ್ಯ ಆರಂಭವಾಗಿದೆ. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರು ಅಧ್ಯಕ್ಷ ಹುದ್ದೆ ಆಕಾಂಕ್ಷಿಗಳ ಸಂದರ್ಶನ ನಡೆಸುತ್ತಿದ್ದಾರೆ. ಮೈಸೂರು ಮೂಲಕ ಪುಷ್ಪಾ ಅಮರನಾಥ್, ನಾಗಲಕ್ಷ್ಮೀ ಚೌಧರಿ, ಕಮಲಾಕ್ಷಿ ರಾಜಣ್ಣ, ಶಾರದಾ ಗೌಡ, ಗೀತಾ ರಾಜಣ್ಣ ಸೇರಿದಂತೆ 12 ಮಹಿಳಾ ನಾಯಕಿಯರ ಸಂದರ್ಶನ ನಡೆದಿದೆ.ಇವರಲ್ಲಿ ಯಾರಾದರೂ ಒಬ್ಬರನ್ನು...
ಸುದ್ದಿ

ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗದಂತೆ ರಾಜ್ಯ ಸರ್ಕಾರ ಕ್ರಮ – ಕಹಳೆ ನ್ಯೂಸ್

ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಲು ನಿರ್ಧರಿಸಿದೆ. ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಕುಮಾರಸ್ವಾಮಿ, 5 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಖರೀದಿಗೆ ಜಾಗತಿಕ ಟೆಂಡರ್ ಕರೆಯಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲು ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪ್ರಸ್ತುತ ರಾಜ್ಯದ ಯಾವುದೇ ವಿದ್ಯುತ್ ಸರಬರಾಜು ಕಂಪೆನಿಯೂ...
ಸುದ್ದಿ

ಅ.28ಕ್ಕೆ ನೆಹರುನಗರದ ರೈಲ್ವೇ ಮೇಲ್ಸೇತುವೆ ಅಗಲೀಕರಣಕ್ಕೆ ಟ್ವಿಟರ್ ಅಭಿಯಾನ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ನೆಹರುನಗರ ಅನೇಕ ಶಿಕ್ಷಣ ಪ್ರಿಯರ ನೆಚ್ಚಿನ ತಾಣ. ಯಾಕೆಂದರೆ ಶತಮಾನದ ಇತಿಹಾಸ ಇರುವ ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ ನೆಹರುನಗರದ ವಿವೇಕಾನಂದ ಕ್ಯಾಂಪಸ್‌ನಲ್ಲಿ ಶಿಶುಮಂದಿರದಿಂದ ತೊಡಗಿ ಸ್ನಾತಕೋತ್ತರ ಕೇಂದ್ರಗಳವರೆಗೆ ಅನೇಕ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದೆ. ಹಾಗಾಗಿಯೇ ಪುತ್ತೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಹರುನಗರದಲ್ಲಿ ಪ್ರತಿನಿತ್ಯ ಸರಿಸುಮಾರು ಎಂಟು ಸಾವಿರ ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬಸ್ ಇಳಿದು ವಿವೇಕಾನಂದ ಕ್ಯಾಂಪಸ್ ಕಡೆ ಹೆಜ್ಜೆ ಹಾಕುತ್ತಾರೆ. ಹೀಗೆ ನೆಹರು ನಗರದಿಂದ ವಿವೇಕಾನಂದ...
ಸುದ್ದಿ

ನವೀಕರಣದ ಜೊತೆ ಹೊಸ ಫೀಚರ್‌ಗಳನ್ನು ಬಳಕೆದಾರರಿಗೆ ಪರಿಚಯಿಸಲಿರುವ ವಾಟ್ಸಾಪ್ – ಕಹಳೆ ನ್ಯೂಸ್

ಬೆಂಗಳೂರು: ಎಲ್ಲರ ಅಚ್ಚುಮೆಚ್ಚಿನ ವಾಟ್ಸಾಪ್, ಇದೀಗ ಖಾತೆಯನ್ನು ಇನ್ನಷ್ಟು ಸುರಕ್ಷಿತಗೊಳಿಸಲು ಮುಂದಾದ ವಾಟ್ಸಾಪ್ ಕೆಲ ದಿನಗಳಿಂದ ನವೀಕರಣದ ಜೊತೆ ಹೊಸ ಫೀಚರ್‌ಗಳನ್ನು ಬಳಕೆದಾರರಿಗೆ ಶೀಘ್ರದಲ್ಲಿಯೇ ಪರಿಚಯಿಸಲಿದೆ. ಡಬ್ಲ್ಯೂ ಎ ಬೀಟಾ ಇನ್ಫೋ ಮಾಹಿತಿ ಪ್ರಕಾರ ವಾಟ್ಸಾಪ್ ಸದ್ಯವೇ ವಾಟ್ಸಾಪ್ ಟಚ್ ಐಡಿ ಹಾಗೂ ಫೇಸ್ ಐಡಿ ಫೀಚರ್ ಶುರು ಮಾಡ್ತಿದೆ. ವಾಟ್ಸಾಪ್‌ನ್ನು ಇನ್ನಷ್ಟು ಸುರಕ್ಷಿತಗೊಳಿಸಲು ಈ ಫೀಚರ್ ಶುರು ಮಾಡಲಾಗುತ್ತಿದ್ದು, ಹೊಸ ಫೀಚ ರ್ ಶುರುವಾದ ನಂತರ ವಾಟ್ಸಾಪ್ ಅಕೌಂಟನ್ನು...
ಸುದ್ದಿ

ಪುತ್ತೂರಿನಲ್ಲಿ ದಿ ವಿಲನ್ ಚಿತ್ರ ಪ್ರದರ್ಶನದ ವೇಳೆ ಚಿತ್ರಮಂದಿರಕ್ಕೆ ನುಗ್ಗಿ ದಾಂದಲೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಅರುಣಾ ಚಿತ್ರಮಂದಿರದಲ್ಲಿ ಚಿತ್ರ ನಟರಾದ ಸುದೀಪ್ ಮತ್ತು ಶಿವರಾಜ್ ಕುಮಾರ್ ನಟಿಸಿರುವ ಕನ್ನಡ ಚಲನ ಚಿತ್ರ ದಿ ವಿಲನ್ ಚಿತ್ರ ಪ್ರದರ್ಶನದ ವೇಳೆ ತಂಡವೊಂದು ಚಿತ್ರಮಂದಿರಕ್ಕೆ ನುಗ್ಗಿ ದಾಂದಲೆ ನಡೆಸಿ ಹಾನಿಯುಂಟು ಮಾಡಿದ ಘಟನೆ ನಡೆದಿದೆ. ದಿ.ವಿಲನ್ ಚಿತ್ರಕ್ಕೆ ಸಂಬಂಧಿಸಿ ದಾವಣೆಗೆರೆಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಪ್ರಾಣಿ ಬಲಿ ಮಾಡಿದ ಹಿನ್ನೆಲೆಯಲ್ಲಿ ಚಿತ್ರ ಪ್ರದರ್ಶನವನ್ನು ನಿಲ್ಲಿಸಬೇಕೆಂದು ಗಲಾಟೆ ದೊಂಬಿ ಮಾಡಿ ಅಕ್ರಮ ಕೂಟ ಕಟ್ಟಿಕೊಂಡು ಚಿತ್ರಮಂದಿರಕ್ಕೆ ಸೊಡಾ ಬಾಟಲಿ...
ಸುದ್ದಿ

3ನೇ ಮಗು ಹೊಂದಿದ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹ: ಸುಪ್ರೀಂಕೋರ್ಟ್ – ಕಹಳೆ ನ್ಯೂಸ್

ಮೂರನೇ ಮಗುವನ್ನು ಹೊಂದಿದ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹನಾಗುತ್ತಾನೆ. ಅಂಥ ವ್ಯಕ್ತಿಗಳು ಪಂಚಾಯತ್ ಸದಸ್ಯ ಅಥವಾ ಸರಪಂಚ ಹುದ್ದೆಗೆ ಸ್ಪರ್ಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎರಡು ಮಕ್ಕಳ ನೀತಿಗೆ ಬದ್ಧವಾಗುವ ಸಲುವಾಗಿ ಮೂರನೇ ಮಗುವನ್ನು ದತ್ತು ನೀಡಿ ಪಂಚಾಯತ್ ಸರಪಂಚ ಹುದ್ದೆ ಉಳಿಸಿಕೊಳ್ಳುವ ಸುಪ್ರೀಂಕೋರ್ಟ್ ಕಟ್ಟೆ ಏರಿದ ಒಡಿಶಾದ ಬುಡಕಟ್ಟು ಜನಾಂಗದ ಸರಪಂಚರೊಬ್ಬರ ವಾದವನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ನ್ಯಾಯಮೂರ್ತಿಗಳಾದ...
ರಾಜಕೀಯಸುದ್ದಿ

ಶ್ರೀರಾಮುಲು ಮುಂದಿನ ಸಿಎಂ: ಮಾಜಿ ಸಚಿವ ವಿ. ಸೋಮಣ್ಣ ಹೇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದರೂ ಬಿಜೆಪಿ, ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಾಗಿದೆ. ಅಧಿಕಾರ ಹಿಡಿಯಲು ಬಿಜೆಪಿ ಸತತ ಪ್ರಯತ್ನ ನಡೆಸುತ್ತಿದ್ದು, ಉಪ ಚುನಾವಣೆ ಎದುರಾದ ಕಾರಣ 'ಆಪರೇಷನ್ ಕಮಲ' ಕ್ಕೆ ಹಿನ್ನಡೆಯಾಗಿದೆ. ಚುನಾವಣೆ ಬಳಿಕ ಕೆಲ ಶಾಸಕರುಗಳು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳಲಾಗುತ್ತಿದ್ದು, ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಮಾಜಿ...
ಸುದ್ದಿ

ಈಜಲು ತೆರಳಿದ್ದ ವಿದ್ಯಾರ್ಥಿಗಳು: ಪ್ರಾಣಾಪಾಯದಿಂದ ಪಾರು – ಕಹಳೆ ನ್ಯೂಸ್

ಮಂಗಳೂರು: ಶಾಲೆಗೆ ರಜೆ ಸಿಕ್ಕರೆ ಮಕ್ಕಳ ಪಾಲಿಗೆ ಹಬ್ಬ. ಈಜಾಡುವುದು, ಹೀಗೆ ಏನಾದರೊಂದು ಸಾಹಸಮಯ ಕಾರ್ಯಕ್ಕೆ ತೊಡಗುತ್ತಾರೆ. ನಾವೂರು ಗ್ರಾಮದ ಬಳಿ ಆಗಿದ್ದು ಇಂತಹದ್ದೇ ಘಟನೆ. ಈಜಾಟವಾಡುವ ಸಾಹಸಕ್ಕೆ ಕೈ ಹಾಕಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ವಿದ್ಯಾರ್ಥಿಗಳು. ವಾಲ್ಮೀಕಿ ಜಯಂತಿ ಸಲುವಾಗಿ ಶಾಲೆಗೆ ರಜೆ ಇತ್ತು. ಹಾಗಾಗಿ 11 ಜನ ವಿದ್ಯಾರ್ಥಿಗಳು ಸೇರಿ ಈಜಾಡುವ ಸಾಹಸಕ್ಕೆ ಮುಂದಾಗಿದ್ದಾರೆ. ಲಕ್ಷ್ಮಿ ವಿಷ್ಣು ಮೂರ್ತಿ ದೇವಸ್ಥಾನದ ಸಮೀಪದ ನೇತ್ರಾವತಿ ನದಿಗೆ ತೆರಳಿದ್ದಾರೆ. ಇವರು...
1 1,318 1,319 1,320 1,321 1,322 1,459
Page 1320 of 1459