Wednesday, June 10, 2026

archivekahale news

ಸುದ್ದಿ

ಪ್ರಧಾನಿ ಮೋದಿ 2018 ರ ಸೋಲ್ ಶಾಂತಿ ಪ್ರಶಸ್ತಿಗೆ ಆಯ್ಕೆ – ಕಹಳೆ ನ್ಯೂಸ್

ದೆಹಲಿ: ವಿಶ್ವಶಾಂತಿ, ಅಂತರರಾಷ್ಟ್ರೀಯ ಸಹಕಾರ ಮತ್ತು ಜಾಗತಿಕ ಆರ್ಥಿಕ ಬೆಳವಣಿಗೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು 2018 ರ ಸೋಲ್ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 'ಮೋದಿನೊಮಿಕ್ಸ್' ಮೂಲಕ ಸಾಮಾಜಿಕ ಹಾಗೂ ಶ್ರೀಮಂತ ಮತ್ತು ಬಡವರ ನಡುವಣ ತಾರತಮ್ಯವನ್ನು ಹೋಗಲಾಡಿಸಲು ನರೇಂದ್ರ ಮೋದಿ ಅವರು ಶ್ರಮಿಸಿದ್ದನ್ನು ದಕ್ಷಿಣ ಕೋರಿಯಾದ ಆಯ್ಕೆ ಸಮಿತಿ ಪರಿಗಣಿಸಿದ್ದು ಮಾತ್ರವಲ್ಲದೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಮತ್ತು ನೋಟು ರದ್ದತಿ ಮೂಲಕ...
ಸುದ್ದಿ

ವೆಸ್ಟ್ ಇಂಡೀಸ್ ವಿರುದ್ಧದ 2 ನೇ ಏಕದಿನ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ ಕೊಹ್ಲಿ – ಕಹಳೆ ನ್ಯೂಸ್

ದೆಹಲಿ: ಟೀಂ ಇಂಡಿಯಾ ಕಾಪ್ಟನ್ ವಿರಾಟ್ ಕೊಹ್ಲಿ ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 2 ನೇ ಏಕದಿನ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 10 ಸಾವಿರರನ್ ಪೂರೈಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಜಾಗ್‌ನಲ್ಲಿ ನಡೆದ ಭಾರತ-ವೆಸ್ಟ್ ಇಂಡೀಸ್ ನಡುವಿನ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ನುಚ್ಚುನೂರು ಮಾಡಿದ್ದಾರೆ. ವಿರಾಟ್...
ಸುದ್ದಿ

ನವಂಬರ್ 11 ರ ನಂತರ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಇನ್ನೇನು ಸಚಿವ ಸಂಪುಟ ವಿಸ್ತರಣೆ ಆಗಿಯೇ ಹೋಯಿತು ಎಂದು ಅಂದುಕೊಳ್ಳುತ್ತಿರುವಾಗ ಉಪಚುನಾವಣೆ ದಿನಾಂಕ ಘೋಷಣೆಯಾಗಿ ಸಚಿವ ಸಂಪುಟ ವಿಸ್ತರಣೆಗೆ ಮಹೂರ್ತ ಮುಂದಕ್ಕೆ ಹೋಗಿತ್ತು. ಈಗ ಬಹುತೇಕ ನವಂಬರ್ 11 ರ ನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಚಿವ ಸ್ಥಾನಕ್ಕಾಗಿ 30 ಕ್ಕೂ ಹೆಚ್ಚು ಮಂದಿ ಸಮ್ಮಿಶ್ರ ಸರ್ಕಾರದ ಉಭಯ ಪಕ್ಷಗಳಲ್ಲಿ ಲಾಭಿ ನಡೆಸಿದ್ದಾರೆ. ಇದು ಕಾಂಗ್ರೆಸಗನಲ್ಲಿ ಎನ್ನುವುದು ವಿಶೇಷವಾಗಿದೆ. ಉಪ ಚುನಾವಣೆಯ ಬಿಜಿಯಲ್ಲಿರುವ...
ಸುದ್ದಿ

ಕೇಂದ್ರ ತನಿಖಾ ದಳದಲ್ಲಿ ಕೆಲ ಅನಪೇಕ್ಷಿತ ಬೆಳವಣಿಗೆಗಳ ವಿರುದ್ಧ ಅ.26, ರಂದು ಪ್ರತಿಭಟನೆ – ಕಹಳೆ ನ್ಯೂಸ್

ದೆಹಲಿ: ಕೇಂದ್ರ ತನಿಖಾ ದಳದಲ್ಲಿ ನಡೆಯುತ್ತಿರುವ ಕೆಲ ಅನಪೇಕ್ಷಿತ ಬೆಳವಣಿಗೆಗಳ ವಿರುದ್ಧ ಅ.26, ರಂದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಶುಕ್ರವಾರದಂದು ನವದೆಹಲಿಯ ಸಿಬಿಐ ಕೇಂದ್ರ ಕಚೇರಿ ಎದುರು ಕೇಂದ್ರ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ, ಆಯಾ ರಾಜ್ಯಗಳ ಸಿಬಿಐ ಕಚೇರಿ ಎದುರು ರಾಜ್ಯ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ದೇಶದಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದು ಕಾಂಗ್ರೆಸ್ ಹೇಳಿದೆ....
ಸುದ್ದಿ

ನಿಯಮ ಗಾಳಿಗೆ ತೂರಿದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು: ಉಡುಪಿ ಡಿಸಿ – ಕಹಳೆ ನ್ಯೂಸ್

ಉಡುಪಿ: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ನಿಗದಿಪಡಿಸಿದ ದರಗಳನ್ನು ಸಾರ್ವಜನಿರಿಗೆ ಕಾಣುವಂತೆ ಪ್ರಶ್ನಿಸಬೇಕೆಂದು ಉಡುಪಿ ಡಿಸಿ ಅಧಿಕಾರಿಗಳ ಪರಿಶೀಲನಾ ತಂಡವನ್ನು ರಚಿಸಿದ್ದು, ನಿಯಮ ಗಾಳಿಗೆ ತೂರಿದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ ಕಾಯಿದೆಯ ಪ್ರಕಾರ ಇದು ಕಡ್ಡಾಯ ಕೂಡ. ಆದರೆ ಹಲವೆಡೆ ಸಾರ್ವಜನಿಕರಿಗೆ ಕಾಣದಂತೆ ಆಸ್ಪತ್ರೆಯ ಮೂಲೆಯಲ್ಲಿ ದರಪಟ್ಟಿ ಅಳವಡಿಸಿ ರೋಗಿಗಳಿಗೆ ವಂಚಿಸಲಾಗುತ್ತಿದೆ. ಇನ್ನು ಹಲವು ಆಸ್ಪತ್ರೆಗಳಲ್ಲಿ ಈ ಹಿಂದೆ ನಮೂದಿಸಿದ್ದ ದರಗಳೇ...
ಸುದ್ದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 51 ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 51 ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಸಿಎಂ ಕುಮಾರಸ್ವಾಮಿ ಆಗಮಿಸಬೇಕಾಗಿತ್ತು. ಆದ್ರೆ ಅನಾರೋಗ್ಯ ಹಿನ್ನೆಲೆಯಲ್ಲಿ ಸಿಎಂ ಗೈರು ಹಾಜರಾಗಿದ್ದರು. ಹೀಗಾಗಿ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಹೆಗ್ಗಡೆಯವ್ರ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭಕ್ಕೂ ಮೊದಲು ನವೀಕರಣಗೊಂಡ ಮಂಜೂಷಾ ವಸ್ತು ಸಂಗ್ರಹಾಲಯದ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ಸಮಾರಂಭದಲ್ಲಿ ಮಾತನಾಡಿದ ಸಚಿವ ರೇವಣ್ಣ, ಹೆಗ್ಗಡೆ...
ಸುದ್ದಿ

ಹರ್ಯಾಣ ಸ್ಟೀಲರ್ಸ್ ಎದುರು ಜಯ ಸಾಧಿಸಿದ ಬೆಂಗಳೂರು ಬುಲ್ಸ್ ತಂಡ – ಕಹಳೆ ನ್ಯೂಸ್

ಪುಣೆ: ಶ್ರೀ ಛತ್ರಪತಿ ಕ್ರೀಡಾಂಗಣದಲ್ಲಿ ನಡೆದ ಪ್ರೊ ಕಬಡ್ಡಿ 2018 ರ ಇಂಟರ್ ಜೋನ್ 5 ನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ಹರ್ಯಾಣ ಸ್ಟೀಲರ್ಸ್ ಎದುರು 42-34ರ ಜಯ ಸಾಧಿಸಿದೆ. ಇದರೊಂದಿಗೆ ಬೆಂಗಳೂರು ಬುಲ್ಸ್ ಝೋನ್ ಬಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿಸಿದೆ. ಬೆಂಗಳೂರಿನಿಂದ ಪವನ್ ಕುಮಾರ್ ಭರ್ಜರಿ 20 ಪಾಯಿಂಟ್‌ಗಳನ್ನು ಸೇರಿಸಿದರು. ಮತ್ತೊಬ್ಬ ಆಟಗಾರ ರೋಹಿತ್ ಕುಮಾರ್ ಕೂಡ 8 ಪಾಯಿಂಟ್ ಕಲೆ ಹಾಕಿ ತಂಡವನ್ನು ಗೆಲುವಿನ ಹೊಸ್ತಿಲಿಗೆ...
ಸುದ್ದಿ

ಸಿಂಡಿಕೇಟ್ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಜಾಗೃತಿ ಅರಿವಿನ ಸಪ್ತಾಹ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಸಿಂಡಿಕೇಟ್ ಬ್ಯಾಂಕ್ ಪುತ್ತೂರು ಇದರ ಪ್ರಾಯೋಜಕತ್ವದಲ್ಲಿ “ಜಾಗೃತಿ ಅರಿವಿನ ಸಪ್ತಾಹ” ಕಾರ್ಯಕ್ರಮವನ್ನು ಅ.23ರಂದು ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳಿಗೆ ‘ಭ್ರಷ್ಟಾಚಾರ ಮುಕ್ತ ಭಾರತ’ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ದೆಯನ್ನು ನಡೆಸಲಾಯಿತು ಹಾಗೂ ವಿದ್ಯಾರ್ಥಿಗಳಿಂದ ಭ್ರಷ್ಟಾಚಾರ ನಿರ್ಮೂಲನೆಯ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕನ್ನಡ ಉಪನ್ಯಾಸಕಿ ಗೀತಾ ಕೊಂಕೋಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಇಂಗ್ಲೀಷ್ ಉಪನ್ಯಾಸಕಿ ವಿಸ್ಮಿತಾ ಮಧುಕರ್ ವಂದಿಸಿದರು....
1 1,320 1,321 1,322 1,323 1,324 1,459
Page 1322 of 1459