Thursday, May 14, 2026

archivekahale news

ಸುದ್ದಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಒಡಿಶಾ ರಾಜ್ಯದಲ್ಲಿ ಭಾರೀ ತಿತ್ಲಿ ಚಂಡಮಾರುತ – ಕಹಳೆ ನ್ಯೂಸ್

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಎದ್ದಿರುವ ಅತ್ಯಂತ ತೀವ್ರ ಚಂಡಮಾರುತ ತಿತ್ಲಿ ಇದೀಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಗಂಟೆಗೆ 165 ಕಿಲೋಮೀಟರ್ ವೇಗದಲ್ಲಿ ಬೀಸುತ್ತಿರುವ ಚಂಡಮಾರುತ ಒಡಿಶಾ ರಾಜ್ಯವನ್ನು ತತ್ತರಿಸುವಂತೆ ಮಾಡಿದೆ. ಹಲವು ಕಡೆಗಳಲ್ಲಿ ವ್ಯಾಪಕ ಭೂಕುಸಿತಗಳು ಸಂಭವಿಸಿದ್ದು, ಕರಾವಳಿಯ ಐದು ಜಿಲ್ಲೆಗಳ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸರ್ಕಾರ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಒಡಿಶಾದ ಗೋಪಾಲಪುರ ಮತ್ತು ಆಂಧ್ರಪ್ರದೇಶದ ಶ್ರೀಕಾಕುಲಂನಲ್ಲಿ ವ್ಯಾಪಕ ಭೂಕುಸಿತ ಸಂಭವಿಸಿದ್ದು, ಆಂಧ್ರಪ್ರದೇಶದ...
ಸುದ್ದಿ

ಓಮಿನಿ ಡಿಕ್ಕಿ: ಸ್ಥಳದಲ್ಲೇ ಚಾಲಕ ಸಾವು – ಕಹಳೆ ನ್ಯೂಸ್

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಓಮಿನಿಯೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೆ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುಪ್ಪಾಳು ಗ್ರಾಮದಲ್ಲಿ ನಡೆದಿದೆ. ಮೃತನನ್ನು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬೆಳಗೆರೆ ಗ್ರಾಮದ ನಿವಾಸಿ ವಿಜಯ್ ಕುಮಾರ್ ಎಂದು ಶಂಕಿಸಲಾಗಿದೆ. ಹಾಗೆ ವಾಹನದಲ್ಲಿದ್ದ ಮಂಜುನಾಥ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತಂತೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ...
ಸುದ್ದಿ

ಸಾಲಬಾಧೆಯಿಂದ ರೈತ ನೇಣಿಗೆ ಶರಣು – ಕಹಳೆ ನ್ಯೂಸ್

ಪುತ್ತೂರು: ಸಾಲಬಾಧೆ ತಡೆಯಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಯಿಲದಲ್ಲಿ ನಡೆದಿದೆ. ಕೈ ಸಾಲ ಹಾಗೂ ಬ್ಯಾಂಕ್ ಸಾಲದಿಂದ ಅರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಕುಶಾಲಪ್ಪ ಎಂದು ಶಂಕಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಸುದ್ದಿ

ಕೆಲಸಕ್ಕೆಂದು ಹೋದ ಮಹಿಳೆ ನಾಪತ್ತೆ – ಕಹಳೆ ನ್ಯೂಸ್

ಮಂಗಳೂರು: ಕೆಲಸಕ್ಕೆಂದು ಹೋದ ಪತ್ನಿ ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾರೆ ಎಂದು ಪತಿ ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಿದ ಘಟನೆ ನಡೆದಿದೆ. ಬಿಸಿರೋಡಿನ ಬಿ. ಮೂಡ ಗ್ರಾಮದ ಕೊಡಕಲ್ ನಿವಾಸಿ ನಾರಾಯಣ ಪೂಜಾರಿ ಅವರ ಪತ್ನಿ ಸವಿತಾ ಕಾಣೆಯಾದ ಮಹಿಳೆ ಎಂದು ಶಂಕಿಸಲಾಗಿದೆ. ಈ ದಂಪತಿಗಳಿಗೆ ಮದುವೆಯಾಗಿ ನಾಲ್ಕು ವರ್ಷಗಳಾಗಿದೆ ಆದರೆ ಮಕ್ಕಳಾಗಿಲ್ಲ. ಎಂದಿನಂತೆ ಇಡ್ಲಿ ಮಾರಾಟ ಮಾಡಲೆಂದು ಪುತ್ತೂರಿಗೆ ಹೋಗುತ್ತೇನೆ ಎಂದು ಮನೆಯಿಂದ ಹೋದವರು ಮತ್ತೆ ವಾಪಾಸು...
ಸುದ್ದಿ

ವಿಧಾನಸಭೆ ಉಪಚುನಾವಣೆ: ಬಿ ಫಾರಂ ಗೆ ವಿಶೇಷ ಪೂಜೆ ಸಲ್ಲಿಸಿದ ಎಚ್‌ಡಿ ರೇವಣ್ಣ – ಕಹಳೆ ನ್ಯೂಸ್

ಬೆಂಗಳೂರು, ಅಕ್ಟೋಬರ್ 11: ವಿಧಾನಸಭೆ ಉಪಚುನಾವಣೆಗೆ ರಾಮನಗರದಿಂದ ನಾಮಪತ್ರ ಸಲ್ಲಿಸಲಿರುವ ಅನಿತಾ ಕುಮಾರಸ್ವಾಮಿ ಅವರ ಬಿ ಫಾರಂಗೆ ಸಚಿವ ಎಚ್‌ಡಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಗೆ ಸಜ್ಜಾಗಿರುವ ದಳಪತಿಗಳು ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ, ಬಿ ಫಾರಂ ಕೂಡ ಇದ್ಧಪಡಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ದೇವರ ಮೇಲೆ ಅಪಾರ ನಂಬಿಕೆ ಇಟ್ಟಿರುವ ಸಚಿವ ಎಚ್‌ಡಿ ರೇವಣ್ಣ ರಾಮನಗರದಿಂದ ನಾಮಪತ್ರ ಸಲ್ಲಿಸಲಿರುವ ಅನಿತಾ ಕುಮಾರಸ್ವಾಮಿ ಅವರ...
ಸುದ್ದಿ

ನೈಸರ್ಗಿಕ ವಿಕೋಪದಿಂದ ಭಾರತ 80 ಶತಕೋಟಿ ಡಾಲರ್ ನಷ್ಟ ಅನುಭವಿಸಿದೆ: ಯುಎನ್‌ಐಎಸ್‌ಡಿಆರ್ ವರದಿ – ಕಹಳೆ ನ್ಯೂಸ್

ಹೊಸದಿಲ್ಲಿ: ಭಾರತದಂಥ ಕಡಿಮೆ ಆದಾಯದ ದೇಶಗಳಲ್ಲಿ ಹವಾಮಾನ ಬದಲಾವಣೆ, ಅಭಿವೃದ್ಧಿ ಪ್ರಕ್ರಿಯೆಯನ್ನು ಅಪಾಯಕಾರಿಯನ್ನಾಗಿ ಮಾಡಿದೆ. ಕಳೆದ 20 ವರ್ಷಗಳಲ್ಲಿ ನೈಸರ್ಗಿಕ ವಿಕೋಪಗಳಿಂದಾಗಿ ಭಾರತ 80 ಶತಕೋಟಿ ಡಾಲರ್ ನಷ್ಟ ಅನುಭವಿಸಿದೆ ಎಂದು ಯುಎನ್ ಆಫೀಸ್ ಫಾರ್ ಡಿಸಾಸ್ಟರ್ ರಿಸ್ಕ್ ರಿಡಕ್ಷನ್ (ಯುಎನ್‌ಐಎಸ್‌ಡಿಆರ್) ಬುಧವಾರ ಬಿಡುಗಡೆಗೊಳಿಸಿದ ಅಧ್ಯಯನ ವರದಿ ಬಹಿರಂಗಪಡಿಸಿದೆ. ಭಾರೀ ಆರ್ಥಿಕ ನಷ್ಟ ಅನುಭವಿಸಿದ ವಿಶ್ವದ ಐದು ಅಗ್ರ ರಾಷ್ಟ್ರಗಳಲ್ಲಿ ಭಾರತವೂ ಒಂದು. ಜಾಗತಿಕವಾಗಿ 1998ರಿಂದ 2017ರ ಅವಧಿಯಲ್ಲಿ ಸುಮಾರು...
ಸುದ್ದಿ

ಕೆಐಎಡಿಬಿ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ: ಕೋಟ್ಯಾಂತರ ರೂ. ಹಣ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ಸರ್ಕಾರ ಕೆಐಎಡಿಬಿಯ ಮುಖ್ಯ ಇಂಜಿನಿಯರ್ ಟಿ.ಆರ್.ಸ್ವಾಮಿ ಅವರನ್ನು ಅಮಾನತು ಮಾಡಿದೆ. ಕಳೆದ ವಾರ ಟಿ.ಆರ್.ಸ್ವಾಮಿ ಮನೆ ಮೇಲೆ ಎಸಿಬಿ ದಾಳಿ ನಡೆಸಿದಾಗ ಕೋಟ್ಯಾಂತರ ರೂ. ಹಣ ಪತ್ತೆಯಾಗಿತ್ತು. ಭ್ರಷ್ಟಾಚಾರ ನಿಗ್ರಹ ದಳ ಟಿ.ಆರ್.ಸ್ವಾಮಿ ಅವರನ್ನು ಅಮಾನತು ಮಾಡಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಶಿಫಾರಸಿನ ಅನ್ವಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ....
ಸುದ್ದಿ

ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪ್ರಭಾವದಿಂದ ಪಿಎಲ್ ಡಿ ಬ್ಯಾಂಕ್ ಮ್ಯಾನೇಜರ್ ಸಸ್ಪೆಂಡ್ – ಕಹಳೆ ನ್ಯೂಸ್

ಬೆಂಗಳೂರು: ಲಕ್ಷ್ಮಿ ಹೆಬ್ಬಾಳ್ಕರ್ ಸೈಲೆಂಟಾಗಿದ್ರೂ ಇದೀಗ ಇನ್ನೊಂದು ಬಾಂಬ್‌ನ್ನು ಸಿಡಿಸಿದ್ದಾರೆ. ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ಮ್ಯಾನೇಜರ್ ಎಸ್ ಟಿ ಕುಲಕರ್ಣಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂಬ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ರೈತರ ಖಾತೆಗೆ ಜಮಾ ಮಾಡಬೇಕಿದ್ದ 12 ಲಕ್ಷ ಹಣವನ್ನು ಸ್ವಂತ ಉಪಯೋಗಕ್ಕೆ ಬಳಸಿಕೊಂಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಮ್ಯಾನೇಜರ್ ಎಸ್ ಟಿ ಕುಲಕರ್ಣಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪ್ರಭಾವದ್ದಿದ್ದರಿಂದಲೇ...
1 1,346 1,347 1,348 1,349 1,350 1,459
Page 1348 of 1459