ಗಿರಿನಗರದ ಶ್ರೀರಾಮಾಶ್ರಮದಲ್ಲಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಗೋಸ್ವರ್ಗ ಚಾತುರ್ಮಾಸ್ಯ ; ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಸಾಮ್ರಾಜ್ಯ ಪಟ್ಟಾಭಿಷೇಕ – ಕಹಳೆ ನ್ಯೂಸ್
ರಾಮಪಟ್ಟಾಭಿಷೇಕದ ಮೂಲಕ ತ್ರೇತಾಯುಗವನ್ನು ಮರಳಿ ನೆನಪಿಸುವ ಕಾರ್ಯ ಮಾಡಲಾಗುತ್ತದೆ. ಶ್ರೀರಾಮಪಟ್ಟಾಭಿಷೇಕದ ನೈಜ ಸ್ವಾಧ, ಆನಂದ ಸಿಗಬೇಕಾದರೆ ಹಿಂದಿನ ರಾಮಾಯಣದ ಅಧ್ಯಯನ ಮಾಡಬೇಕು. ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ರಾಮನ ರಾಜತ್ವವನ್ನು ಪ್ರತಿಯೊಬ್ಬರೂ ಅಂಗೀಕರಿಸಿದ್ದೀರಿ ಎಂದು ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಅವರು ಬುಧವಾರ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಗೋಸ್ವರ್ಗ ಚಾತುರ್ಮಾಸ್ಯ ಶುಭಸಂದರ್ಭದಲ್ಲಿ ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಸಾಮ್ರಾಜ್ಯ ಪಟ್ಟಾಭಿಷೇಕ ಸೇವೆಯ ಸಂದರ್ಭ ನಡೆದ ಧಾರ್ಮಿಕ ಸಭೆಯಲ್ಲಿ...







