ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ – ಕಹಳೆ ನ್ಯೂಸ್
ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಜಾನೆಯಿಂದಲೇ ಅಂಗಡಿ ಮುಂಗಟ್ಟುಗಳಿಗೆ ಬೀಗ ಹಾಕಿ ವರ್ತಕರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಗರದೆಲ್ಲೆಡೆ ಆಟೋ ಇನ್ನೀತರ ವಾಹನ ಸಂಚಾರ ಸಹ ಬಂದ್ ಮಾಡಲಾಗಿತ್ತು. ಇನ್ನು ರೈತ ಸಂಘಟನೆ ಹಾಗೂ ಇನ್ನೀತರ ಪ್ರಗತಿಪರ ಸಂಘಟನೆಗಳು ಹಾಗೂ ಜನ ಪ್ರತಿನಿಧಿಗಳು...
