ವಿಶ್ವಸಂಸ್ಥೆಯ ಚಾಂಪಿಯನ್ಸ್ ಆಫ್ ದ ಅರ್ಥ್ ಪ್ರಶಸ್ತಿ ಸ್ವೀಕರಿಸಿದ ಮೋದಿ – ಕಹಳೆ ನ್ಯೂಸ್
ನವದೆಹಲಿ: ವಿಶ್ವಸಂಸ್ಥೆಯ ಪರಿಸರ ವಿಭಾಗ ನೀಡುವ ಚಾಂಪಿಯನ್ಸ್ ಆಫ್ ದ ಅರ್ಥ್ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಸ್ವೀಕರಿಸಿದರು. ದೆಹಲಿಯಲ್ಲಿ ಆಯೋಜನೆಗೊಂಡಿದ್ದ ವಿಶೇಷ ಸಮಾರಂಭದಲ್ಲಿ ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರೆಸ್ ಈ ಪ್ರಶಸ್ತಿ ಪ್ರದಾನ ಮಾಡಿದರು. ಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆ ಪರಿಣಾಮಗಳನ್ನು ತಡೆಗಟ್ಟಲು ದೂರದೃಷ್ಟಿ ನಿಲುವು ತಳೆದಿರುವ ಕಾರಣ ಪ್ರಧಾನಿ ಮೋದಿ ಅವರಿಗೆ ವಿಶ್ವಸಂಸ್ಥೆಯ ಈ ಪ್ರಶಸ್ತಿ ಲಭಿಸಿದೆ. ಅಂತಾರಾಷ್ಟ್ರೀಯ ಸೌರ ಮಹಾಒಕ್ಕೂಟ (ಐಎಸ್ಎ) ರಚನೆಯಲ್ಲಿ...
